ಹಾವೇರಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶಿಗ್ಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಶನಿವಾರ ನಾಮಪತ್ರ ಸಲ್ಲಸಿದರು.
ಸಿಎಂ ಬಸವರಾಜ ಬೊಮ್ಮಾಯಿ ಅವರು ಎಪ್ರಿಲ್ 19ರಂದು ಪಕ್ಷದ ಕಾರ್ಯಕರ್ತರು, ಬೆಂಬಲಿಗರೊಂದಿಗೆ ಶಕ್ತಿ ಪ್ರದರ್ಶನ ಮೂಲಕ ನಾಮಪತ್ರ ಸಲ್ಲಿಸಲು ತಯಾರಿ ನಡೆಸಿದ್ದಾರೆ. ಆದರೆ, ಇಂದು ಅವರು ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ್ದಾರೆ.
ಶಿಗ್ಗಾವಿ ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ಇಂದು ತಮ್ಮ ಉಮೇದುವಾರಿಗೆ ಸಲ್ಲಿಸಿದರು. ಸಚಿವ ಸಿ.ಸಿ.ಪಾಟೀಲ, ಸಂಸದ ಶಿವಕುಮಾರ ಉದಾಸಿ ಸಾಥ್ ಸಹಿತ ಬಿಜೆಪಿ ನಾಯಕರು ಸಿಎಂ ಬೊಮ್ಮಾಯಿ ಜೊತೆಗಿದ್ದರು.
ನವ ಭಾರತಕ್ಕಾಗಿ ನವ ಕರ್ನಾಟಕವನ್ನು ನಿರ್ಮಿಸುವ ಮಹತ್ವದ ಸಂಕಲ್ಪದ ಹಿನ್ನೆಲೆಯಲ್ಲಿ, ಇಂದು ನನ್ನ ತವರು ಕ್ಷೇತ್ರ ಶಿಗ್ಗಾಂವಿ-ಸವಣೂರಿನಲ್ಲಿ ನಾಮಪತ್ರ ಸಲ್ಲಿಸುವ ಮುನ್ನ, ನನ್ನ ಆರಾಧ್ಯ ದೈವ ಶ್ರೀ ಸಿದ್ಧಾರೂಢ ಮಠಕ್ಕೆ ಭೇಟಿ ನೀಡಿ ದೇವರ ಆಶೀರ್ವಾದ ಪಡೆದುಕೊಂಡೆನು. pic.twitter.com/fTgcr44VF4
— Basavaraj S Bommai (Modi Ka Parivar) (@BSBommai) April 15, 2023