ಪತ್ರಕರ್ತ ಹನುಮಂತು ನಿಧಾನಕ್ಕೆ ಗಣ್ಯರ ಕಂಬನಿ; ಡಿಕೆ, ಹೆಚ್ಡಿಕೆ ನೆರವಿನ ಹಸ್ತ

ರಾಮನಗರ: ಅಪಘಾತದಲ್ಲಿ ಪಬ್ಲಿಕ್ ಟಿವಿ‌ವರದಿಗಾರ ಹನುಮಂತು ಮೃತಪಟ್ಟಿದ್ದು ಅವರ ನಿಧಾನಕ್ಕೆ ವಿವಿಧ ಕ್ಷೇತ್ರಗಳ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

ಪಾದರಾಯನಪುರ ಗಲಭೆಯ ಆರೋಪಿಗಳನ್ನ ರಾಮನಗರದ ಕಾರಾಗೃಹಕ್ಕೆ ಕರೆತಂದಿದ್ದ ಸುದ್ದಿಗೆ ತೆರಳಿದ್ದ ಸಂಧರ್ಭದಲ್ಲಿ ATM ವಾಹನ ಡಿಕ್ಕಿಯಾಗಿ ಪತ್ರಕರ್ತ ಹನುಮಂತು ಸಾವನ್ನಪ್ಪಿದ್ದರು. ಹನುಮಂತು ಕಳೆದ 6 ವರ್ಷಗಳಿಂದಲೂ ರಾಮನಗರ ವದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದರು. ಹನುಮಂತು ನಿಧನಕ್ಕೆ ರಾಮನಗರ ಜಿಲ್ಲಾ ಪತ್ರಕರ್ತ ಸಹೋದ್ಯೋಗಿಗಳು ಕಂಬನಿ‌ ಮಿಡಿದಿದ್ದಾರೆ.  ಮುಖ್ಯಮಂತ್ರಿ ಯಡಿಯೂರಪ್ಪ ಅವರೂ ಹನುಮಂತು ನಿಧಾನಕ್ಕೆ ಕಂಬನಿ ಮಿಡಿದಿದ್ದಾರೆ.

ರಸ್ತೆ ಅಪಘಾತದಲ್ಲಿ ಮಂಗಳವಾರ ಸಾವನ್ನಪ್ಪಿದ ರಾಮನಗರ ಜಿಲ್ಲೆ ಪಬ್ಲಿಕ್ ಟಿವಿ ವರದಿಗಾರ ಹನುಮಂತು ಅವರ ಕುಟುಂಬದ ಸದಸ್ಯರನ್ನು ಭೇಟಿ ಮಾಡಿದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸಾಂತ್ವನ ಹೇಳಿದರು. ಹಾರೋಹಳ್ಳಿ ಹೋಬಳಿಯ ಪಡುವಣಗೆರೆ ಬಳಿ ಇರುವ ಹನುಮಂತು ಮನೆಗೆ ಭೇಟಿ ನೀಡಿದ ಕುಮಾರಸ್ವಾಮಿ, ಹನುಮಂತು ಪತ್ನಿ ಹಾಗೂ ಕುಟುಂಬ ಸದಸ್ಯರಿಗೆ ಧೈರ್ಯ ತುಂಬಿದರು. ಇದೆ ವೇಳೆ, ಹನುಮಂತ್ ಅವರ ಪತ್ನಿ ಶಶಿಕಲಾ ಅವರಿಗೆ ಐದು ಲಕ್ಷ ರೂಪಾಯಿಗಳ ಚೆಕ್ಕನ್ನು ಹೆಚ್ಡಿಕೆ ನೀಡಿದರು.

ಇನ್ನೊಂದೆಡೆ, ಉಪಮುಖ್ಯಮಂತ್ರಿ ಡಾ.ಅಶ್ವಥನಾರಾಯಣ ಅವರು 5 ಲಕ್ಷ ರೂಪಾಯಿ ಹಾಗೂ ಕೆಪಿಸಿಸಿ‌ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು5 ಲಕ್ಷ ರೂಪಾಯಿ ನೆರವು ಘೋಷಣೆ ಮಾಡಿದ್ದಾರೆ.

ಇದನ್ನೂ ಓದಿ.. ಸುದ್ದಿವಾಹಿನಿಯ 25 ಮಂದಿಗೆ ಸೋಂಕು; ಸುದ್ದಿಗಾರೇ ಸುದ್ದಿಯಾದರು 

 

Related posts