ಬೆಂಗಳೂರು: ತಮ್ಮ ಪಕ್ಷದ ವಿರುದ್ಧ ಟೀಕೆ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಹೆಚ್.ಡಿ.ಕುಮಾರಸ್ವಾಮಿ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ.
ಸರಣಿ ಟ್ವೀಟ್ ಮೂಲಕ ತಮ್ಮ ಆಕ್ರೋಶ ಹೊರಹಾಕಿರುವ ಕುಮಾರಸ್ವಾಮಿ, ಜೆಡಿಎಸ್ ಪಕ್ಷದಲ್ಲಿದ್ದಾಗ ಅಧಿಕಾರ, ಸ್ಥಾನ-ಮಾನಗಳನ್ನು ಅನುಭವಿಸಿ ತಮ್ಮ ಬೆಂಬಲಿಗರೊಂದಿಗೆ ಗಂಟು ಮೂಟೆ ಕಟ್ಟಿಕೊಂಡು ಅಧಿಕಾರದ ಆಸೆಗಾಗಿ, ಅವಕಾಶವಾದಿ ಹಾದಿ ಹಿಡಿದ ಕೃತಘ್ನಗೇಡಿತನದ ಸಿದ್ದರಾಮಯ್ಯ ಅವರಿಂದ ನಮ್ಮ ಪಕ್ಷ ಸ್ವಾಭಿಮಾನದ ಪಾಠ ಕಲಿಯಬೇಕಿಲ್ಲ. ನಿಮ್ಮ ಸ್ವಾಭಿಮಾನದ ಪ್ರಲಾಪ ಮಠದೊಳಗಿನ ಬೆಕ್ಕಿನ ಮುಖವಾಡದಂತಿದೆ ಎಂದು ಸಿದ್ದರಾಮಯ್ಯ ವಿರುದ್ಧ ಸಿಟ್ಟು ಹೊರಹಾಕಿದ್ದಾರೆ.
ಅಧಿಕಾರದ ಲಾಲಸೆಯಿಂದ ಕಾಂಗ್ರೆಸ್ ಗೆ ಜಿಗಿದ ಸಿದ್ದರಾಮಯ್ಯ ಅವರು ‘ಜೆಡಿಎಸ್ ಅವಕಾಶವಾದಿ ಪಕ್ಷ’ ಎನ್ನುವ ಮೂಲಕ ತಮ್ಮ ಊಸರವಳ್ಳಿ ರಾಜಕಾರಣದ ನಿಜಬಣ್ಣ ಬಯಲು ಮಾಡಿಕೊಂಡಿದ್ದಾರೆ ಎಂದು ಸಿಟ್ಟು ಹೊರಹಾಕಿದ್ದಾರೆ.
ಅಧಿಕಾರದ ಲಾಲಸೆಯಿಂದ ಕಾಂಗ್ರೆಸ್ ಗೆ ಜಿಗಿದ ಸಿದ್ದರಾಮಯ್ಯ ಅವರು 'ಜೆಡಿಎಸ್ ಅವಕಾಶವಾದಿ ಪಕ್ಷ' ಎನ್ನುವ ಮೂಲಕ ತಮ್ಮ ಊಸರವಳ್ಳಿ ರಾಜಕಾರಣದ ನಿಜಬಣ್ಣ ಬಯಲು ಮಾಡಿಕೊಂಡಿದ್ದಾರೆ.
1/7— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) September 20, 2020
ಜೆಡಿಎಸ್ ಪಕ್ಷದಲ್ಲಿದ್ದಾಗ ಅಧಿಕಾರ, ಸ್ಥಾನ-ಮಾನಗಳನ್ನು ಅನುಭವಿಸಿ ತಮ್ಮ ಬೆಂಬಲಿಗರೊಂದಿಗೆ ಗಂಟು ಮೂಟೆ ಕಟ್ಟಿಕೊಂಡು ಅಧಿಕಾರದ ಆಸೆಗಾಗಿ, ಅವಕಾಶವಾದಿ ಹಾದಿ ಹಿಡಿದ ಕೃತಘ್ನಗೇಡಿತನದ ಸಿದ್ದರಾಮಯ್ಯ ಅವರಿಂದ ನಮ್ಮ ಪಕ್ಷ ಸ್ವಾಭಿಮಾನದ ಪಾಠ ಕಲಿಯಬೇಕಿಲ್ಲ.ನಿಮ್ಮ ಸ್ವಾಭಿಮಾನ ದ ಪ್ರಲಾಪ ಮಠದೊಳಗಿನ ಬೆಕ್ಕಿನ ಮುಖವಾಡದಂತಿದೆ.
ಜೆಡಿಎಸ್ ಪಕ್ಷದಲ್ಲಿದ್ದಾಗ ಅಧಿಕಾರ, ಸ್ಥಾನ-ಮಾನಗಳನ್ನು ಅನುಭವಿಸಿ ತಮ್ಮ ಬೆಂಬಲಿಗರೊಂದಿಗೆ ಗಂಟು ಮೂಟೆ ಕಟ್ಟಿಕೊಂಡು ಅಧಿಕಾರದ ಆಸೆಗಾಗಿ, ಅವಕಾಶವಾದಿ ಹಾದಿ ಹಿಡಿದ ಕೃತಘ್ನಗೇಡಿತನದ ಸಿದ್ದರಾಮಯ್ಯ ಅವರಿಂದ ನಮ್ಮ ಪಕ್ಷ ಸ್ವಾಭಿಮಾನದ ಪಾಠ ಕಲಿಯಬೇಕಿಲ್ಲ.
ನಿಮ್ಮ ಸ್ವಾಭಿಮಾನದ ಪ್ರಲಾಪ ಮಠದೊಳಗಿನ ಬೆಕ್ಕಿನ ಮುಖವಾಡದಂತಿದೆ.
2/7— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) September 20, 2020
ಕಾಂಗ್ರೆಸ್ ಮುಖ್ಯಮಂತ್ರಿಯಾಗಿದ್ದಾಗಲೇ ಬಹಿರಂಗವಾಗಿ ಕಾಂಗ್ರೆಸ್ ಪಕ್ಷ ನಿರ್ನಾಮವಾಗಬೇಕು. ಇದನ್ನು ಬುಡಸಹಿತ ಕಿತ್ತೊಗೆಯಬೇಕು ಎಂದು ಬಹಿರಂಗವಾಗಿ ಅಂತರಂಗದ ಮಾತನ್ನು ಉದ್ಗರಿಸಿದ್ದ ನೀವು ಎಂತಹ ಸ್ವಾರ್ಥಿ ಮತ್ತು ಎಡಬಿಡಂಗಿತನದ ರಾಜಕಾರಣಿ ಎಂಬುದು ಇಡೀ ನಾಡಿಗೆ ಗೊತ್ತಿದೆ.

3/7— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) September 20, 2020
ಅಧಿಕಾರದ ನಿರ್ಮೋಹ, ಸ್ವಾಭಿಮಾನಕ್ಕೆ ಕಟ್ಟುಬಿದ್ದು ದೇವೇಗೌಡರು ಪ್ರಧಾನಿ ಹುದ್ದೆಯನ್ನೇ ತ್ಯಜಿಸಿ ಬಂದರು. ಅಧಿಕಾರ ಉಳಿಸಿಕೊಳ್ಳಬೇಕೆಂದಿದ್ದರೆ ಪ್ರಧಾನಿಯಾಗಿ ಮುಂದುವರಿಯಬಹುದಿತ್ತು. ದೇವೇಗೌಡರ ಈ ಸ್ವಾಭಿಮಾನಿ ರಾಜಕಾರಣವನ್ನು ಇಷ್ಟು ಬೇಗ ಮರೆತು ಬಿಟ್ಟಿರಾ? ಆತ್ಮವಂಚನೆಯ ರಾಜಕಾರಣಿಯಿಂದ ಜೆಡಿಎಸ್ ಕಲಿಯುವುದು ಏನೇನೂ ಇಲ್ಲ.

4/7— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) September 20, 2020
ಜೆಡಿಎಸ್ ಪಕ್ಷ ಅಧಿಕಾರದಲ್ಲಿ ಇದ್ದಾಗಲೆಲ್ಲಾ ಜನರ ಕಷ್ಟಕಾರ್ಪಣ್ಯಗಳು, ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸಿದೆ. ಅಧಿಕಾರದ ಮದ ಮತ್ತು ದುರಹಂಕಾರವನ್ನು ಎಂದೂ ಪ್ರದರ್ಶನ ಮಾಡಿಲ್ಲ. ಅಧಿಕಾರದ ಅಲ್ಪಾವಧಿಯಲ್ಲೂ ಜನಕಲ್ಯಾಣ ಪಕ್ಷದ ಹೆಗ್ಗುರುತಾಗಿತ್ತು.

5/7— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) September 20, 2020
ಪಕ್ಷಾಂತರ ಮಾಡಿ ಅಧಿಕಾರ ಹಿಡಿದ ನೀವು ಆ ಪಕ್ಷದಲ್ಲಿ ಬಿತ್ತಿದ ಬೆಳೆ ಮತ್ತು ಕಳೆ ಏನೆಂಬುದನ್ನು ನಿಮ್ಮನ್ನು ಆಲಿಂಗಿಸಿಕೊಂಡ ಪಕ್ಷದವರು ಈಗ ಅನುಭವಿಸುತ್ತಿದ್ದಾರೆ. ನಿಮ್ಮ ಸ್ವಾರ್ಥ ರಾಜಕಾರಣದ ಕುಟಿಲ ತಂತ್ರಗಳನ್ನು ಮರೆಮಾಚಿಕೊಳ್ಳಲು ಬೆಳೆದ ಪಕ್ಷಕ್ಕೆ ಮಗ್ಗುಲಲ್ಲಿ ಇದ್ದು ಬಾಕು ಹಾಕಿದವರ ಮಾರ್ಜಾಲ ಉಪದೇಶ ಯಾರಿಗೆ ಸಹ್ಯವಾದೀತು?

6/7— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) September 20, 2020