ಬೆಂಗಳೂರು: ಭಾರೀ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಜಿಲ್ಲೆಯ ಶಾಲೆಗಳಿಗೆ ಬುಧವಾರ ರಜೆ ಘೋಷಣೆ ಮಾಡಲಾಗಿದೆ.
ಬೆಂಗಳೂರು ಜಿಲ್ಲಾಧಿಕಾರಿ ಜಗದೀಶ್ ಅವರು ಈ ಸಂಬಧ ಆದೇಶ ಹೊರಡಿಸಿದ್ದಾರೆ. ಬೆಂಗಳೂರು ನಗರ ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಹಾಗಾಗಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿಗಳು ಬೆಂಗಳೂರು ನಗರದ ಎಲ್ಲಾ ಶಾಲೆಗಳಿಗೆ ರಜೆ ಘೋಷಿಸಿದ್ದಾರೆ.
ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಖಾಸಗಿ, ಅನುದಾನಿತ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.