ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಜುಲೈ 10ರವರೆಗೆ ಮುನ್ಸೂಚನೆ ನೀಡಿದೆ. ಅದರ ಪ್ರಕಾರ, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ಕೊಡಗು ಹಾಗೂ ಬೆಳಗಾವಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಧಾರವಾಡ ಜಿಲ್ಲೆಗೆ ಯೆಲ್ಲೋ ಅಲರ್ಟ್ ಜಾರಿಯಲ್ಲಿದ್ದು, ಸುರಕ್ಷತಾ ಕ್ರಮ ಕೈಗೊಳ್ಳುವಂತೆ ಇಲಾಖೆ ಎಚ್ಚರಿಕೆ ನೀಡಿದೆ.
ರಾಜ್ಯದ ಇತರ ಹಲವು ಜಿಲ್ಲೆಗಳಲ್ಲಿ ಸಹ ಮಳೆಯಾಗಲಿದ್ದು, ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣದಿಂದ ತೀವ್ರ ಮಳೆಯಾಗುವ ನಿರೀಕ್ಷೆಯಿದೆ.
ಜಿಲ್ಲಾಡಳಿತಗಳು ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದ್ದು, ಸಾರ್ವಜನಿಕರು ಪ್ರವಾಹಪೀಡಿತ ಪ್ರದೇಶಗಳಿಗೆ ಹೋಗದೇ ಸುರಕ್ಷಿತವಾಗಿ ಇರಬೇಕೆಂದು ಸಹ ಸಲಹೆ ನೀಡಲಾಗಿದೆ.