ಬೆಂಗಳೂರು: ಹೈಕೋರ್ಟ್ ತೀರ್ಪೊಂದು ಜಾತ್ಯತೀತ ಜನತಾ ದಳಕ್ಕೆ ಆಘಾತ ತಂದಿದೆ. ಹಾಸನ ಲೋಕಸಭಾ ಕ್ಷೇತ್ರದಿಂದ ಗೆದ್ದಿದ್ದ ಜೆಡಿಎಸ್ ನಾಯಕ ಪ್ರಜ್ವಲ್ ರೇವಣ್ಣ ಅವರ ಆಯ್ಕೆಯನ್ನು ಹೈಕೋರ್ಟ್ ಅಸಿಂಧುಗೊಳಿಸಿ ಆದೇಶಿಸಿದೆ.
ಚುನಾವಣಾ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರು ನೀಡಿರುವ ಪ್ರಮಾಣ ಪತ್ರದಲ್ಲಿ ತಪ್ಪು ಮಾಹಿತಿ ನೀಡಿದ್ದಾರೆಂದು ಆರೋಪಿಸಿ ವಕೀಲ ದೇವರಾಜೇಗೌಡ ಹಾಗೂ ಪರಾಜಿತ ಬಿಜೆಪಿ ಅಭ್ಯರ್ಥಿ ಎ.ಮಂಜು ಅವರು ಕೋರ್ಟ್ ಮೆಟ್ಟಿಲೇರಿದ್ದರು. ತಪ್ಪು ಮಾಹಿತಿ ಹಿನ್ನೆಲೆಯಲ್ಲಿ ಪ್ರಜ್ವಲ್ ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕೆಂದು ಅರ್ಜಿದಾರರು ಕೋರಿದ್ದರು.
ಈ ಅರ್ಜಿ ಕುರಿತಂತೆ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ ನಟರಾಜನ್ ಅವರಿದ್ದ ಪೀಠ ಪ್ರಜ್ವಲ್ ರೇವಣ್ಣ ಆಯ್ಕೆಯನ್ನು ಅಸಿಂಧುಗೊಳಿಸಿದೆ.