ಪಂಚಮಸಾಲಿಗಳಿಗೆ ಆರಂಭಿಕ ಜಯ: ಮೀಸಲಾತಿ ಹೋರಾಟಗಾರರ ಮೇಲಿನ ಲಾಠಿ ಚಾರ್ಜ್ ಬಗ್ಗೆ ನ್ಯಾಯಾಂಗ ತನಿಖೆಗೆ ಹೈಕೋರ್ಟ್ ಆದೇಶ

ಧಾರವಾಡ: ಬೆಳಗಾವಿಯಲ್ಲಿ ನಡೆದ ಅಧಿವೇಶನದ ಸಂದರ್ಭದಲ್ಲಿ ಡಿಸೆಂಬರ್ 10 ರಂದು ಪಂಚಮಸಾಲಿ ಮೀಸಲಾತಿ ಹೋರಾಟಗಾರರ ಮೇಲೆ ನಡೆದ ಲಾಠಿ ಚಾರ್ಜ್ ಘಟನೆ ಕುರಿತಂತೆ ನ್ಯಾಯಾಂಗ ತನಿಖೆಗೆ ಧಾರವಾಡ ಹೈಕೋರ್ಟ್ ಪೀಠ ಆದೇಶಿಸಿದೆ.

ಪಂಚಮಸಾಲಿ ಲಿಂಗಾಯತ ಸಮುದಾಯಕ್ಕೆ 2ಎ ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿ ನಡೆದ ಪ್ರತಿಭಟನೆ ವೇಳೆ ಪೊಲೀಸ್ ಲಾಠಿ ಪ್ರಹಾರ ನಡೆದಿತ್ತು. ಲಾಠಿ ಚಾರ್ಜ್ ಘಟನೆಯಲ್ಲಿ ಅನೇಕರು ಗಾಯಗೊಂಡಿದ್ದರು. ಈ ಪೊಲೀಸ್ ದೌರ್ಜನ್ಯ ಕುರಿತು ನ್ಯಾಯಾಂಗ ತನಿಖೆಗೆ ಆದೇಶಿಸಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್​​ ಶುಕ್ರವಾರ ತೀರ್ಪು ಪ್ರಕಟಿಸಿದೆ.

ಲಾಠಿ ಚಾರ್ಜ್ ಬಗ್ಗೆ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಯಿಂದ ತನಿಖೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

Related posts