FIRಗೆ ಹೈಕೋರ್ಟ್ ತಡೆ: ಸೂಲಿಬೆಲೆ ನಿರಾಳ

ಧಾರವಾಡ : ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದದಲ್ಲಿ ಸಿಲುಕಿರುವ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ನಿರಾಳರಾಗಿದ್ದಾರೆ. ಅವರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ಗೆ ಧಾರವಾಡದ ಹೈಕೋರ್ಟ್ ಪೀಠ ಮಧ್ಯಂತರ ತಡೆಯಾಜ್ಞೆ ನೀಡಿದೆ.

ಅಕ್ಟೋಬರ್ 3 ರಂದು ಅವರು ಚಕ್ರವರ್ತಿ ಸೂಲಿಬೆಲೆ ಸಿಎಂ ಸಿದ್ದರಾಮಯ್ಯ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ. ಸಿದ್ದರಾಮಯ್ಯನವರು ಅಧಿಕಾರಕ್ಕೆ ಬಂದಾಗಲೆಲ್ಲಾ ಹಿಂದೂಗಳು ತೊಂದರೆ ಎದುರಿಸುತ್ತಿದ್ದಾರೆ. ಮುಸ್ಲಿಮರನ್ನು ಬೆಂಬಲಿಸುವವರೆಗೂ ಇಂಥ ಘಟನೆಗಳು ನಡೆಯುತ್ತಲೇ ಇರುತ್ತವೆ ಎಂದು ಚಕ್ರವರ್ತಿ ಸೂಲಿಬೆಲೆ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಕಾರವಾರ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ
ಎಫ್‌ಐಆರ್‌ ರದ್ದುಪಡಿಸುವಂತೆ ಸೂಲಿಬೆಲೆ ಅವರು ಹೈಕೋರ್ಟ್ ಮೊರೆ ಹೋಗಿದ್ದರು. ಇದೀಗ ಎಫ್‌ಐ‌ಆರ್‌ಗೆ ಮಧ್ಯಂತರ ತಡೆಯಾಜ್ಞೆ ಸಿಕ್ಕಿದ್ದು ಚಕ್ರವರ್ತಿ ಸೂಲಿಬೆಲೆ ಅವರು ನಿರಾಳರಾಗಿದ್ದಾರೆ.‌

Related posts