ಕೊಳ್ಳೇಗಾಲ ಬಳಿ ಭೀಕರ ಅಪಘಾತ: ಐವರು ದುರ್ಮರಣ

ಚಾಮರಾಜನಗರ: ಕೊಳ್ಳೇಗಾಲ ತಾಲೂಕಿನಲ್ಲಿ ಶನಿವಾರ ಬೆಳಿಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಸಾವನ್ನಪ್ಪಿದ್ದಾರೆ. ಕೊಳ್ಳೇಗಾಲ ತಾಲೂಕಿನ ಚಿಕ್ಕಿಂದುವಾಡಿ ಬಳಿಯ ಮುಖ್ಯರಸ್ತೆಯಲ್ಲಿ ಕಾರು ಮತ್ತು ಟಿಪ್ಪರ್ ನಡುವೆ ಈ ಅಪಘಾತ ಸಂಭವಿಸಿದೆ.

ಕಾರಿನಲ್ಲಿದ್ದ ಮೂವರು ಪುರುಷರು ಇಬ್ಬರು ಮಹಿಳೆಯರು ಮೃತಪಟ್ಟಿದ್ದಾರೆ. ಇವರೆಲ್ಲರೂ ಮಂಡ್ಯ ಮೂಲದವರು ಎನ್ನಲಾಗಿದ್ದು, ಮಲೆಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಇವರು ಕಾರಿನಲ್ಲಿ ತೆರಳುತ್ತಿದ್ದರು ಎಂದು ಎನ್ನಲಾಗಿದೆ.

Related posts