ದಕ್ಷಿಣ ಭಾರತದಲ್ಲಿ ಪಾರುಪತ್ಯಕ್ಕೆ ಬಿಜೆಪಿ ರಣನೀತಿ ; ಸುಧಾಕರ್’ಗೆ ಹೊಣೆ

ಬೆಂಗಳೂರು: ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಅವರಿಗೆ ಬಿಜೆಪಿ ಹೈಕಮಾಂಡ್ ಮಹತ್ವದ ಜವಾಬ್ಧಾರಿ ವಹಿಸಿದೆ. ದಕ್ಷಿಣ ಭಾರತದಲ್ಲಿ ಪಾರುಪಥ್ಯ ಸ್ಥಾಪಿಸಲು ರಣತಂತ್ರ ರೂಪಿಸುತ್ತಿರುವ ಕೇಸರಿ ಪಡೆ ಈ ಬಾರಿ ತೆಲುಗಿನ ರಾಜ್ಯಗಳತ್ತ ಗಮನ ಕೇಂದ್ರೀ ಕರಿಸಿದೆ. ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆ ಸದ್ಯದಲ್ಲೇ ನಡೆಯಲಿದ್ದು ಅದರಲ್ಲಿ ಜಯಭೇರಿ ಭಾರಿಸಿ ಆ ಭಾಗದಲ್ಲಿ ಅಧಿಪತ್ಯ ಸ್ಥಾಪಿಸಲು ಕಾರ್ಯತಂತ್ರ ರೂಪಿಸಿದೆ. ಇದಕ್ಕಾಗಿ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಅವರ ಉಸ್ತುವಾರಿಯ ಅಗತ್ಯದ ಬಗ್ಗೆ ಪಕ್ಷದ ವರಿಷ್ಠರು ಗಮನ ಕೇಂದ್ರೀಕರಿಸಿದ್ದಾರೆ.

ಈ ಬಗ್ಗೆ ಪ್ರಕಟಣೆಯೊಂದನ್ನು ಹೊರಡಿಸಿರುವ ಬಿಜೆಪಿ ಹೈಕಮಾಂಡ್, ಸಚಿವ ಸುಧಾಕರ್ ಅವರಿಗೆ ಈ ಮಹತ್ವದ ಜವಾಬ್ದಾರಿ ನೀಡಿದೆ. ಈ ಕುರಿತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಆದೇಶ ಹೊರಡಿಸಿದ್ದಾರೆ.

ಸಚಿವ ಸುಧಾಕರ್ ಜೊತೆಗೆ ಮಹಾರಾಷ್ಟ್ರ ಶಾಸಕ ಅಶೀಶ್, ಗುಜರಾತಿನ ಬಿಜೆಪಿ ಮುಖಂಡ ಪ್ರದೀಪ್ ಸಿಂಗ್ ವಾಘೇಲಾ ಹಾಗೂ ಸತೀಶ್ ರೆಡ್ಡಿ ಕೂಡಾ ಉಸ್ತುವಾರಿ ನೋಡಿಕೊಳ್ಳಲಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಸುಧಾಕರ್, ಜವಾಬ್ದಾರಿಯನ್ನು ನಿರ್ವಹಿಸಲು ಶಕ್ತಿ ಮೀರಿ ಶ್ರಮಿಸುತ್ತೇನೆ ಎಂದಿದ್ದಾರೆ.

Related posts