ಶಿಕ್ಷಕರ ಧ್ವನಿಯ ಗೆಲುವು: ವಿಶ್ವಾಸ ಉಳಿಸಿಕೊಂಡು ಕೆಲಸ ಮಾಡುತ್ತೇನೆ ಎಂದ ಪರಿಷತ್’ಗೆ ಆಯ್ಕೆಯಾದ ಎ.ಪಿ. ರಂಗನಾಥ್

ಬೆಂಗಳೂರು: ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಗೆಲುವು ಸಾಧಿಸಿರುವ ಎನ್‌ಡಿಎ ಅಭ್ಯರ್ಥಿ ಎ.ಪಿ. ರಂಗನಾಥ್ ಅವರು, ತಮ್ಮ ಗೆಲುವಿಗೆ ಶ್ರಮಿಸಿದ ಶಿಕ್ಷಕ ಬಾಂಧವರು ಹಾಗೂ ಮೈತ್ರಿಕೂಟದ ನಾಯಕರು ಮತ್ತು ಕಾರ್ಯಕರ್ತರಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.

“ನನಗೆ ಗೆಲುವು ತಂದುಕೊಟ್ಟ ಪ್ರಜ್ಞಾವಂತ ಶಿಕ್ಷಕ ಬಾಂಧವರಿಗೆ ಹಾಗೂ ಹಗಲಿರುಳು ಶ್ರಮಿಸಿದ ಎನ್‌ಡಿಎ ಮೈತ್ರಿಕೂಟದ ಎಲ್ಲ ನಾಯಕರು, ಮುಖಂಡರು ಮತ್ತು ಕಾರ್ಯಕರ್ತರಿಗೆ ಹೃತ್ಪೂರ್ವಕ ಧನ್ಯವಾದಗಳು” ಎಂದು ಅವರು ತಿಳಿಸಿದ್ದಾರೆ.

ಈ ಗೆಲುವು ಪ್ರಜ್ಞಾವಂತ ಶಿಕ್ಷಕರ ಧ್ವನಿಯ ಗೆಲುವು ಹಾಗೂ ಎಲ್ಲರ ಒಗ್ಗಟ್ಟಿನ ವಿಜಯವಾಗಿದೆ ಎಂದು ಅಭಿಪ್ರಾಯಪಟ್ಟಿರುವ ರಂಗನಾಥ್, ಶಿಕ್ಷಕರು ತಮ್ಮ ಮೇಲೆ ಇಟ್ಟಿರುವ ವಿಶ್ವಾಸವನ್ನು ಉಳಿಸಿಕೊಂಡು ಅವರ ಪರವಾಗಿ ನಿರಂತರವಾಗಿ ಶ್ರಮಿಸುವುದಾಗಿ ಭರವಸೆ ನೀಡಿದ್ದಾರೆ.

ತಮ್ಮನ್ನು ಬೆಂಬಲಿಸಿ ಐತಿಹಾಸಿಕ ಗೆಲುವಿಗೆ ಕಾರಣರಾದ ಶಿಕ್ಷಕರು ಹಾಗೂ ಚುನಾವಣೆಯಲ್ಲಿ ಹಗಲಿರುಳು ದುಡಿದ ಎನ್‌ಡಿಎ ಮುಖಂಡರು ಮತ್ತು ಕಾರ್ಯಕರ್ತರಿಗೆ ಅವರು ಮತ್ತೊಮ್ಮೆ ಕೃತಜ್ಞತೆ ಸಲ್ಲಿಸಿದ್ದಾರೆ.

Related posts