ಐಎಎಸ್ ಅಧಿಕಾರಿ ವಿಜಯ್ ಶಂಕರ್ ಆತ್ಮಹತ್ಯೆ

ಬೆಂಗಳೂರು: ರಾಜ್ಯದ ಹಿರಿಯ ಐಎಎಸ್ ಅಧಿಕಾರಿ ವಿಜಯ್ ಶಂಕರ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಐಎಂಎ ಹಗರಣ ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ವಿಜಯ್ ಶಂಕರ್ ತಮ್ಮ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ.

ಐಎಂಎ ಪ್ರಕರಣದಲ್ಲಿ ಲಂಚ ಪಡೆದ ಆರೋಪ ಇವರ ಮೇಲಿದೆ. ಈ ಆರೋಪದ ಹಿನ್ನೆಲೆಯಲ್ಲಿ ಕಳೆದ ವರ್ಷ ಜುಲೈನಲ್ಲಿ ಎಸ್‍ಐಟಿ ಅಧಿಕಾರಿಗಳು ವಿಜಯ್ ಶಂಕರ್ ಅವರನ್ನು ಬಂಧಿಸಿದ್ದರು. ಬಳಿಕ ಅವರು ಜಾಮೀನು ಪಡೆದ ವಿಜಯ್ ಶಂಕರ್ ಹೊರ ಬಂದಿದ್ದರು.

ಮಂಗಳವಾರ ಅವರು ಬೆಂಗಳೂರಿನ ಜಯನಗರದ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Related posts