ಬೆಂಗಳೂರು: ರಾಜ್ಯದ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಕೊರೋನಾ ಕಾರಣದಿಂದಾಗಿ ವಿಳಂಬವಾದರೂ ಉತ್ತಮ ಫಲಿತಾಂಶ ಬಂದಿದೆ.
ರಾಜ್ಯ ಪದವಿ ಪೂರ್ವ ಶಿಕ್ಷಣ ಇಲಾಖೆ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಈ ಬಾರಿ ವಿಶೇಷ ರೀತಿಯಲ್ಲಿ ಪ್ರಕಟಿಸಿದೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್, ಈ ವರ್ಷ ಶೇಕಡಾ 68.73ರಷ್ಟು ಫಲಿತಾಂಶ ಬಂದಿದೆ ಎಂದರು. ಈ ಬಾರಿಯೂ ಹುಡುಗಿಯರೇ ಮೇಲಗೈ ಸಾಧಿಸಿದ್ದಾರೆ ಎಂದ ಅವರು, ರಾಜ್ಯದಲ್ಲಿ ಶೇಕಡಾ 54.77 ವಿದ್ಯಾಥಿಗಳು ತೇರ್ಗಡೆ ಹೊಂದಿದ್ದಾರೆ ಎಂದು ತಿಳಿಸಿದರು.
ಫಲಿತಾಂಶದಲ್ಲಿ ಉಡುಪಿ ಪ್ರಥಮ ಸ್ಥಾನದಲ್ಲಿದ್ದು, ದಕ್ಷಿಣ ಕನ್ನಡ ಎರಡನೇ ಸ್ಥಾನದಲ್ಲಿದೆ. ಮತ್ತು ಮೂರನೇ ಸ್ಥಾನ ಕೊಡಗು ಪಾಲಾಗಿದೆ. ವಿದ್ಯಾರ್ಥಿಗಳ ಮೊಬೈಲ್ ಸಂಖ್ಯೆಗೆ ಫಲಿತಾಂಶ ಕಳುಹಿಸಲಾಗಿದ್ದು, ಇಲಾಖೆಯ ವೆಬ್ ಸೈಟ್ http://karresults.nic.in ನಲ್ಲೂ ಫಲಿತಾಂಶ ಲಭ್ಯವಿದೆ ಎಂದು ಇಲಾಖೆ ತಿಳಿಸಿದೆ.