ಶ್ರೀಲಂಕಾ ಕ್ರಿಕೆಟ್ ತಂಡದ ಉದ್ದೇಶಿತ ಭಾರತ ಪ್ರವಾಸ ರದ್ದು

ದೆಹಲಿ: ಈ ಜಗತ್ತಿನಾದ್ಯಂತ ಕೊರೋನಾ ವೈರಸ್ ಹಾವಳಿ ಹೆಚ್ಚುತ್ತಿದ್ದು ಭಾರತವಂತೂ ಕೋವಿಡ್-೧೯ ಸೋಂಕಿತ ರಾಷ್ಟ್ರಗಳ ಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೆ ಜಿಗಿದಿದೆ. ಇದೇ ವೇಳೆ ಶ್ರೀಲಂಕಾ ಕ್ರಿಕೆಟ್ ತಂಡವು ಉದ್ದೇಶಿತ ಭಾರತ ಪ್ರವಾಸವನ್ನು ರದ್ದುಗೊಳಿಸಿದೆ.

ಜೂನ್ ತಿಂಗಳ ಕೊನೆಯಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ ಸರಣಿ ನಡೆಯುವ ಬಗ್ಗೆ ಭಾರತ ನಿರೀಕ್ಷೆ ಹೊಂದಿತ್ತು. ಭಾರತ-ಶ್ರೀಲಂಕಾ ನಡುವೆ 3 ಏಕದಿನ ಹಾಗೂ 3 ಟಿ20 ಪಂದ್ಯಗಳನ್ನು ಆಯೋಜಿಸುವ ಬಗ್ಗೆ ಸಿದ್ಧತೆ ನಡೆದಿತ್ತು.

ಆದರೆ ಭಾರತದಲ್ಲಿ ಸೋಂಕು ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಉಭಯ ರಾಷ್ಟ್ರಗಳ ಕ್ರಿಕೆಟ್‌ ಮಂಡಳಿಗಳು ಸೇರಿ ಈ ಕ್ರಿಕೆಟ್ ಸರಣಿಯನ್ನು ರದ್ದುಗೊಳಿಸುವ ನಿರ್ಧಾರಕ್ಕೆ ಬಂದಿವೆ.

Related posts