ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

ಲಖನೌ: ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಇಂಗ್ಲೆಂಡ್ ವಿರುದ್ಧ ಜಯಭೇರಿ ಭಾರಿಸಿರುವ ಭಾರತ ತಂಡ ಅಂಕ ಪಟ್ಟಿಯಲ್ಲಿ ಅಗ್ರ ಸ್ಥಾನಕ್ಕೆ ಏರಿದೆ. ಭಾನುವಾರ ಇಂಗ್ಲೆಂಡ್ ವಿರುದ್ಧ ಜಯಗಳಿಸಿರುವ ಟೀಮ್ ಇಂಡಿಯಾ ಸೆಮಿಫೈನಲ್ಸ್ ಪ್ರವೇಶಿಸಿದ ಮೊದಲ ತಂಡವಾಗಿ ಗಮನಸೆಳೆದಿದೆ.

ಭಾನುವಾರ ಲಖನೌದಲ್ಲಿ ಇಂಗ್ಲೆಂಡ್ ವಿರುದ್ಧ ನಡೆದ ಪಂದ್ಯದಲ್ಲಿ ಭಾರತ 100 ರನ್ ಗಳ ಜಯ ಗಳಿಸಿದೆ. ಮೊದಲು ಬ್ಯಾಟಿಂಗ್ ನಡೆಸಿದ ಭಾರತ ತಂಡ ನಿಗಧಿತ 50 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 229ರನ್ ಗಳಿಸಿತ್ತು. 230 ರನ್ ಗಳ ಗುರಿ ಬೆನ್ನಟ್ಟಿದ ಇಂಗ್ಲೆಂಡ್ ಟೀಮ್ ಇಂಡಿಯಾದ ಬೌಲಿಂಗ್ ದಾಳಿಗೆ ತತ್ತರಿಸಿ, 129 ರನ್ ಗಳಿಸುವಷ್ಟರಲ್ಲೇ ಸರ್ವಪತನ ಕಂಡಿತು. ಈ ಮೂಲಕ ವಿಶ್ವಕಪ್ ಟೂರ್ನಿಯಲ್ಲಿ ಈ ಗೆಲುವಿನ ಮೂಲಕ 100 ರನ್ ಗಳ ಜಯ ಗಳಿಸಿದ ಭಾರತ ತಂಡ ವಿಶ್ವಕಪ್ ಟೂರ್ನಿಯ ಸೆಮಿಫೈನಲ್ಸ್ ಪ್ರವೇಶಿಸಿದ ಮೊದಲ ತಂಡವಾಗಿದೆ. ಇಂಗ್ಲೆಂಡ್ 10 ನೇ ಸ್ಥಾನಕ್ಕೆ ಕುಸಿದಿದೆ.

ಅಂಕಪಟ್ಟಿಯಲ್ಲಿ ದಕ್ಷಿಣ ಆಫ್ರಿಕಾ ಇದ್ದರೆ, ನ್ಯೂಜಿಲ್ಯಾಂಡ್ ಮೂರನೇ ಸ್ಥಾನದಲ್ಲಿದೆ. 4 ಸ್ಥಾನದಲ್ಲಿಆಸ್ಟ್ರೇಲಿಯಾ, 5ನೇ ಸ್ಥಾನದಲ್ಲಿ ಶ್ರೀಲಂಕಾ, 6ನೇ ಸ್ಥಾನದಲ್ಲಿ ಪಾಕಿಸ್ತಾನ ಇದೆ.

Related posts