ಮಂಗಳೂರು: ಬಂದರು ನಗರಿ ಮಂಗಳೂರು ಸೇರಿದಂತೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೋನಾ ಸೋಂಕು ಆತಂಕಕಾರಿ ರೀತಿಯಲ್ಲಿ ಹರಡುತ್ತಿದೆ.
ದಕ್ಷಿಣಕನ್ನಡ ಜಿಲ್ಲೆಯಲ್ಲಿ ಜನಪ್ರತಿನಿಧಿಗಳನ್ನೂ ಸೋಂಕು ಅಪ್ಪಿಕೊಂಡಿದ್ದು, ಶಾಸಕ ಭಾರತ್ ಶೆಟ್ಟಿ, ಬಂಟ್ವಾಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದೇವದಾಸ್ ಶೆಟ್ಟಿ ಸೇರಿದಂತೆ ಅನೇಕರು ಸೋಂಕಿಗೊಳಗಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದೇ ವೇಳೆ ಕೇಂದ್ರದ ಮಾಜಿ ಸಚಿವ, ಕಾಂಗ್ರೆಸ್’ನ ಹಿರಿಯ ನಾಯಕ ಜನಾರ್ಧನ ಪೂಜಾರಿ ಅವರೂ ಕೋವಿಡ್-19 ಸೋಂಕಿಗೊಳಗಾಗಿದ್ದಾರೆ. ಜನಾರ್ಧನ ಪೂಜಾರಿಯವರು ಚಿಕಿತ್ಸೆ ಪಡೆಯುತ್ತಿದ್ದು ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ಅವರ ಪುತ್ರ ಸಂತೋಷ್ ಸಂತೋಷ್ ತಿಳಿಸಿದ್ದಾರೆ.