ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿದ್ದ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು ಜಯನಗರ ಕ್ಷೇತ್ರದಲ್ಲಿ ಅಚ್ಚರಿಯ ಫಲಿತಾಂಶ ವ್ಯಕ್ತವಾಗಿದೆ. ಮರು ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ರಾಮಮೂರ್ತಿ ಅವರು ಜಯಸಾಧಿಸಿದ್ದಾರೆ.
ಜಯನಗರ ವಿಧಾನಸಭಾ ಕ್ಷೇತ್ರದ ಮತಣಿಕೆ ಶನಿವಾರವೇ ನಡೆದು ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ ಅವರು ಬಿಜೆಪಿಯ ರಾಮಮೂರ್ತಿ ವಿರುದ್ದ 294 ಮತಗಳಿಂದ ಜಯಗಳಿಸಿದ್ದಾರೆಂದು ಘೋಷಿಸಲಾಗಿತ್ತು. ಆದರೆ ಮತ ಎಣಿಕೆಯಲ್ಲಿ ಲೋಪವಾಗಿದೆ ಎಂದು ಆಕ್ಷೇಪಿಸಿರುವ ಬಿಜೆಪಿ ನಾಯಕರು ಚುನಾವಣಾ ಅಧಿಕಾರಿಗಳ ಮೇಲೆ ಒತ್ತಡ ಹೇರಿ ಮತ್ತೊಮ್ಮೆ ಎಣಿಕೆ ಮಾಡಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಮರು ಮತ ಎಣಿಕೆ ನಂತರ ಬಿಜೆಪಿ ಹುರಿಯಾಳು ರಾಮಮೂರ್ತಿ ಅವರಿಗೆ 17 ಮತಗಳ ಮುನ್ನಡೆ ಸಾಧಿಸಿದ್ದಾರೆ.
ಈ ಸುದ್ದಿ ತಿಳಿಯುತ್ತಿದ್ದಂತೆಯೇ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.
BJP wins Jayanagar by 17 votes, making the electoral contest more thrilling than RCB matches. pic.twitter.com/lQRhKntlBe
— Shamanth (@shamant_18) May 13, 2023