ಹೆಚ್.ಡಿ.ಕುಮಾರಸ್ವಾಮಿ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ದಿಢೀರ್ ಅಸ್ವಸ್ಥರಾದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದೀಗ ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಕುಮಾರಸ್ವಾಮಿ ಅವರಿಗೆ ತೀವ್ರ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬುಧವಾರ ನಸುಕಿನ ವೇಳೆ ಬೆಂಗಳೂರಿನ ಜಯನಗರದಲ್ಲಿರುವ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಮಾರಸ್ವಾಮಿ ಅವರಿಗೆ ಚಿಕಿತ್ಸೆ ನೀಡಿದ್ದು, ಸದ್ಯಕ್ಕೆ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ವೈದ್ಯರು ತಿಳಿಸಿದ್ದಾರೆ‌. ಸುಸ್ತು-ಆಯಾಸ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಅವರಿಗೆ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಈ ಬಗ್ಗೆ ಅಪೋಲೊ ಆಸ್ಪತ್ರೆಯು ಹೆಲ್​ ಬುಲೆಟಿನ್​ ಬಿಡುಗಡೆ ಮಾಡಿದೆ.

Related posts