ಲೋಕಾ ಸಮರದಲ್ಲಿ ಬಿಜೆಪಿ-ಜೆಡಿಎಸ್ ದೋಸ್ತಿ; NDA ಗರಡಿ ಸೇರಿದ ಗೌಡರ ಸೈನ್ಯ

ನವದೆಹಲಿ: ರಾಜ್ಯ ರಾಜಕಾರಣದಲ್ಲಿ ಹೊಸ ಮನ್ವಂತರ ಆರಂಭವಾಗಿದೆ. ರಾಜಕೀಯದಲ್ಲಿ ಪ್ರಬಲ ಸೈದ್ದಾಂತಿಕ ಎದುರಾಳಿಗಳಾಗಿರುವ ಬಿಜೆಪಿ-ಜೆಡಿಎಸ್ ಪಕ್ಷಗಳು ಒಂದಾಗಿವೆ. ಮುಂಬರುವ ಲೀಕಸಭಾ ಚುನಾವಣೆಯಲ್ಲಿ ಮೈತ್ರಿ ಹೋರಾಟಕ್ಕೆ ಎರಡೂ ಪಕ್ಷಗಳು ಸಂಕಲ್ಪತೊಟ್ಟಿವೆ.

ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ ಸಂಬಂಧ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಕಸರತ್ತು ನಡೆಸಿದ್ದಾರೆ. ದೆಹಲಿಯಲ್ಲಿ ಶುಕ್ರವಾರ ಗೃಹ ಸಚಿವ ಅಮಿತ್ ಶಾ ಉಪಸ್ಥಿತಿಯಲ್ಲಿ ಉಭಯ ಪಕ್ಷಗಳ ನಾಯಕರು ಮಹತ್ವದ ಮಾತುಕತೆ ನಡೆಸಿದರು. ಬಿಜೆಪಿ ನೇತೃತ್ವದ ಎನ್‌ಡಿಎ ಜೊತೆ ಕೈಜೋಡಿಸುವ ಪ್ರಕ್ರಿಯೆಗೆ ಮುನ್ನುಡಿ ಬರೆದ ಈ ಮುಖಂಡರು ಮುಂಬರುವ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ .ಅಡಿಕೊಳ್ಳುವ ಬಗೆಗಿನ ಕುತೂಹಲಗಳಿಗೆ ರೋಚಕತೆ ತುಂಬಿದರು.

ನಿಖಿಲ್ ಕುಮಾರ ಸ್ವಾಮಿ ಸಹಿತ ಜೆಡಿಎಸ್ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

Related posts