ಬೆಂಗಳೂರು; ವಿಧಾನಸಭಾ ಚುನಾವಣೆ ಫಲಿತಾಙಶ ಅನಾವರಣವಾಗುತ್ತಿದ್ದಂತೆಯೇ ಸರ್ಕಾರ ರಚನೆಯ ಕಸರತ್ತು ಇದೀಗ ರಾಜ್ಯ ರಾಜಕಾರಣದ ಕುತೂಹಲದ ಕೇಂದ್ರಬಿಂದುವಾಗಿದೆ. ಇದೇ ಹೊತ್ತಲ್ಲಿ ಬೊಮ್ಮಾಯಿ ಸರ್ಕಾರದಲ್ಲಿ ಪ್ರಭಾವಿ ಸಚಿವರಾಗಿದ್ದ ಡಾ.ಸುಧಾಕರ್ ಬಹಿರಂಗಪಡಿಸಿರುವ ಸ್ಫೋಟಕ ಸಂಗತಿಯೊಂದು ಸಂಚಲನ ಸೃಷ್ಟಿಸಿದೆ. ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರುವ ಮುನ್ನ ಜೆಡಿಎಸ್-ಕಾಂಗ್ರೆಸ್ ಸಮ್ನಿಶ್ರ ಸರ್ಕಾರದಲ್ಲಿನ ಸೂಕ್ಷ್ಮ ವಿಚಾರಗಳನ್ನು ಸುಧಾಕರ್ ಅವರು ಬಹಿರಂಗಪಡಿಸಿದ್ದಾರೆ.
ಸಮ್ಮಿಶ್ರ ಸರ್ಕಾರ ಪತನ ಕುರಿತು ಮಾಜಿ ಸಚಿವ ಡಾ.ಕೆ.ಸುಧಾಕರ್ ಸ್ಫೋಟಕ ಹೇಳಿಕೆ ನೀಡಿದ್ದು, ಆ ಸನ್ನಿವೇಶಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಅವರೇ ಕಾರಣ ಎಂದು ಹೇಳಿದ್ದಾರೆ. ಈ ಬಗ್ಗೆ ವರು ಮಾಡಿರುವ ಸರಣಿ ಟ್ವೀಟ್‌ಗಳು ಭಾರೀ ಚರ್ಚೆಗೂ ಎಡೆಮಾಡಿಕೊಟ್ಟಿದೆ. ಸಮ್ಮಿಶ್ರ ಸರ್ಕಾರದ ಪತನದಲ್ಲಿ ಸಿದ್ದರಾಮಯ್ಯ ಪಾತ್ರ ನಿರಾಕರಿಸಲು ಸಾಧ್ಯವೇ? ಎಂಬ ಪ್ರಶ್ನೆಯನ್ನು ಸುಧಾಕರ್ ಮುಂದಿಟ್ಟಿದ್ದಾರೆ.
ನಮ್ಮ ಕ್ಷೇತ್ರಗಳಲ್ಲಿ ನಮ್ಮನ್ನು ನಂಬಿದ ಕಾರ್ಯಕರ್ತರನ್ನ, ಮುಖಂಡರನ್ನ ಉಳಿಸಿಕೊಳ್ಳಲು ದೊಡ್ಡ ರಿಸ್ಕ್ ತೆಗೆದುಕೊಂಡು ರಾಜೀನಾಮೆ ಕೊಟ್ಟು ಮತ್ತೊಮ್ಮೆ ಜನರಿಂದ ಆರಿಸಿ ಬಂದು ಮಂತ್ರಿಗಳಾದೆವು.
ನಮ್ಮ ನಡೆಯಲ್ಲಿ ಮಾನ್ಯ ಸಿದ್ದರಾಮಯ್ಯನವರ ಪ್ರೇರಣೆ, ಪರೋಕ್ಷ ಅಥವಾ ಅಪರೋಕ್ಷ ಪಾತ್ರ ಇಲ್ಲವೆಂದು ಸಿದ್ದರಾಮಯ್ಯನವರು ನಿರಾಕರಿಸಲು ಸಾಧ್ಯವೇ?
3/3
— Dr Sudhakar K (Modi ka Parivar) (@DrSudhakar_) May 17, 2023
2018ರಲ್ಲಿ ಅಂದಿನ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ನಮಗಾಗುತ್ತಿದ್ದ ಅನ್ಯಾಯದ ಬಗ್ಗೆ ಹೇಳಿಕೊಳ್ಳಲು ಶಾಸಕರುಗಳು ಸಮನ್ವಯ ಸಮಿತಿ ಅಧ್ಯಕ್ಷರಾಗಿದ್ದ ಸಿದ್ದರಾಮಯ್ಯನವರ ಬಳಿ ಹೋದಾಗಲೆಲ್ಲ ಈ ಸರ್ಕಾರದಲ್ಲಿ ನನ್ನದೇ ಏನು ನಡೆಯುತ್ತಿಲ್ಲ, ನನ್ನ ಕ್ಷೇತ್ರದ, ನನ್ನ ಜಿಲ್ಲೆಯ ಕೆಲಸಗಳೇ ಆಗುತ್ತಿಲ್ಲ ಎಂದು ಹೇಳುತ್ತಿದ್ದರು ಎಙದು ಸುಧಾಕರ್ ಟ್ವೀಟ್‌ನಲ್ಲಿ ಹೇಳಿದ್ದಾರೆ.
2019ರ ಲೋಕಸಭೆ ಚುನಾವಣೆವರೆಗೂ ಸಹಿಸಿಕೊಳ್ಳಿ, ಲೋಕಸಭೆ ಚುನಾವಣೆ ಮುಗಿದ ನಂತರ ಯಾವುದೇ ಕಾರಣಕ್ಕೂ ಒಂದು ದಿವಸವೂ ಮಾನ್ಯ ಕುಮಾರಸ್ವಾಮಿ ಅವರ ನೇತೃತ್ವದ ಈ ಸಮ್ಮಿಶ್ರ ಸರ್ಕಾರ ಇರಲು ಬಿಡುವುದಿಲ್ಲ ಎಂದು ಶಾಸಕರುಗಳಿಗೆ ಸಮಾಧಾನ ಮಾಡುತ್ತಿದ್ದರು ಎಂದು ಸುಧಾಕರ್ ಹೇಳಿಕೊಂಡಿದ್ದಾರೆ.
ನಮ್ಮ ಕ್ಷೇತ್ರಗಳಲ್ಲಿ ನಮ್ಮನ್ನು ನಂಬಿದ ಕಾರ್ಯಕರ್ತರನ್ನ, ಮುಖಂಡರನ್ನ ಉಳಿಸಿಕೊಳ್ಳಲು ದೊಡ್ಡ ರಿಸ್ಕ್ ತೆಗೆದುಕೊಂಡು ರಾಜೀನಾಮೆ ಕೊಟ್ಟು ಮತ್ತೊಮ್ಮೆ ಜನರಿಂದ ಆರಿಸಿ ಬಂದು ಮಂತ್ರಿಗಳಾದೆವು. ನಮ್ಮ ನಡೆಯಲ್ಲಿ ಸಿದ್ದರಾಮಯ್ಯನವರ ಪ್ರೇರಣೆ, ಪರೋಕ್ಷ ಅಥವಾ ಅಪರೋಕ್ಷ ಪಾತ್ರ ಇಲ್ಲವೆಂದು ಸಿದ್ದರಾಮಯ್ಯನವರು ನಿರಾಕರಿಸಲು ಸಾಧ್ಯವೇ? ಎಂದು ಸುಧಾಕರ್ ಪ್ರಶ್ನಿಸಿದ್ದಾರೆ.
2018ರಲ್ಲಿ ಅಂದಿನ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ನಮಗಾಗುತ್ತಿದ್ದ ಅನ್ಯಾಯದ ಬಗ್ಗೆ ಹೇಳಿಕೊಳ್ಳಲು ಶಾಸಕರುಗಳು ಸಮನ್ವಯ ಸಮಿತಿ ಅಧ್ಯಕ್ಷರಾಗಿದ್ದ ಮಾನ್ಯ ಸಿದ್ದರಾಮಯ್ಯನವರ ಬಳಿ ಹೋದಾಗಲೆಲ್ಲ ಈ ಸರ್ಕಾರದಲ್ಲಿ ನನ್ನದೇ ಏನು ನಡೆಯುತ್ತಿಲ್ಲ, ನನ್ನ ಕ್ಷೇತ್ರದ, ನನ್ನ ಜಿಲ್ಲೆಯ ಕೆಲಸಗಳೇ ಆಗುತ್ತಿಲ್ಲ ಎಂದು ಹೇಳುತ್ತಿದ್ದರು.
1/3
— Dr Sudhakar K (Modi ka Parivar) (@DrSudhakar_) May 17, 2023