ಟಿವಿ ಸಂಪಾದಕರ ಮೇಲಿನ ದಾಳಿ ಯತ್ನ ಪ್ರಕರಣ; ಇಬ್ಬರ ಬಂಧನ

ಮುಂಬೈ: ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿ ಹಾಗೂ ಅವರ ಪತ್ನಿ ಮೇಲೆ ದಾಳಿ ಯತ್ನ ಪ್ರಕರಣ ಕೋಲಾಹಲಕ್ಕೆ ಕಾರಣವಾಗಿದೆ. ಈ ಕೃತ್ಯದ ಸಂಬಂಧ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ಸಾಧುಗಳ ಹತ್ಯೆ ಪ್ರಕರಣ ಕುರಿತಂತೆ ಕಾಂಗ್ರೆಸ್ ನಾಯಕಿ ಸೋನಿಯಾ ಹೆಸರನ್ನು ಸುದ್ದಿ ವಾಹಿನಿಯ ಚರ್ಚೆಯಲ್ಲಿ ಅರ್ನಬ್ ಗೋಸ್ವಾಮಿ ಪ್ರಸ್ತಾಪಿಸಿರುವ ವಿಚಾರ ಭಾರೀ ಚರ್ಚೆಗೆ ಕಾರಣವಾಗಿದೆ. ಈ ವಿಚಾರ ಕುರಿತಂತೆ ಸಾಮಾಜಿಕ ಜಾಲತಾಣಗಳಲ್ಲಿ ಪರ ವಿರೋಧ ಅಭಿಪ್ರಾಯಗಳೂ ವ್ಯಕ್ತವಾಗುತ್ತಿವೆ. ಇನ್ನೂ ಕೆಲವೆಡೆ ಕಾಂಗ್ರೆಸ್ ನಾಯಕರು ಅರ್ನಬ್ ಗೋಸ್ವಾಮಿ ವಿರುದ್ಧ ಪೊಲೀಸರಿಗೆ ದೂರು ನೀಡುವ ಪ್ರಯತ್ನವನ್ನೂ ಮಾಡಿದ್ದಾರೆ. ಇದೆ ಸಂದರ್ಭದಲ್ಲಿ ಅರ್ನಬ್ ಗೋಸ್ವಾಮಿ ಮೇಲೆ ಹಲ್ಲೆ ಯತ್ನ ನಡೆದಿದೆ.

ಮುಂಬೈನ ವೊರ್ಲಿಯಲ್ಲಿರುವ ರಿಪಬಲಿಕ್ ಟಿವಿ ಕಚೇರಿಯಿಂದ ಮಧ್ಯರಾತ್ರಿ 12.15ರ ಸುಮಾರಿಗೆ ಗಣಪತ್ರಾವ್ ಕದಮ್ ಮಾರ್ಗ್ ಪ್ರದೇಶದಲ್ಲಿ ಮನೆಗೆ ತೆರಳಿತ್ತಿದ್ದ ಸಂದರ್ಭದಲ್ಲಿ ನನ್ನ ಮೇಲೆ ಹಾಗೂ ಪತ್ನಿ ಮೇಲೆ ದಾಳಿ ನಡೆಸಲಾಗಿದೆ. ಬೈಕ್ ನಲ್ಲಿ ಬಂದ ಇಬ್ಬರು ಅಪರಿಚಿತರು ಕಾರಿನ ಮೇಲೆ ದಾಳಿ ನಡೆಸಿದ್ದರು. ನಾವಿದ್ದ ಕಾರಿನ ಚಾಲಕನ ಸೀಟ್ ಬಳಿ ಕಿಟಿಕಿಗೆ ಸಾಕಷ್ಟು ಬಾರಿ ಹೊಡೆದರು. ಬಳಿಕ ಬಾಟಲಿ ತೆಗೆದು ಅದರಲ್ಲಿದ್ದ ದ್ರವದ ರೀತಿಯ ವಸ್ತುವನ್ನು ಕಾರಿನ ಮೇಲೆಲ್ಲಾ ಸುರಿದಿದ್ದಾರೆ ಎಂದು ಅರ್ನಬ್ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.

ಈ ಘಟನೆ ಬಗ್ಗೆ ಅರ್ನಬ್ ಗೋಸ್ವಾಮಿ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ನೀಡಿದ್ದು, ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಕೃತ್ಯ ಸಂಬಂಧ ಇಬ್ಬರನ್ನು ಬಂಧಿಸಿರುವುದಾಗಿಯೂ ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ.. ಆರೋಗ್ಯ ಸಿಬ್ಬಂದಿ ಮೇಲೆ ಹಲ್ಲೆ ಮಾಡೀರಿ ಜೋಕೆ; 7 ವರ್ಷ ಜೈಲು ಖಚಿತ 

 

Related posts