ಕಮಲನಾಥ್ ಕೋಟೆಯಲ್ಲಿ ಕಮಲ ಅರಳಿಸಲು ಬಿಜೆಪಿ ಪ್ರಕ್ರಿಯೆ ಆರಂಭ

ದೆಹಲಿ: ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಸಿಡಿದೆದ್ದು ಮಧ್ಯಪ್ರದೇಶ ಕಾಂಗ್ರೆಸ್ ಸರ್ಕಾರಕ್ಕೆ ಬಲವಾದ ಏಟು ನೀಡಿದ ಜ್ಯೋತಿರಾದಿತ್ಯ ಸಿಂಧಿಯಾ ಇದೀಗ ಕೇಸರಿ ಪಕ್ಷದ ಸೇನಾನಿ. ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದ ಜ್ಯೋತಿರಾದಿತ್ಯ ಸಿಂಧಿಯಾ ಅವರು ಬುಧವಾರ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾದರು.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಜ್ಯೋತಿರಾದಿತ್ಯ ಸಿಂಧಿಯಾ ಅವರು ಇಂದು ಬಿಜೆಪಿ ಸೇರ್ಪಡೆಯಾದರು. ಈ ಮೂಲಕ ಕಮಲನಾಥ್ ಸರ್ಕಾರವಿರುವ ಮಧ್ಯಪ್ರದೇಶದಲ್ಲಿ ಕಮಲ ಅರಳಿಸುವ ಪ್ರಕ್ರಿಯೆಗೆ ಅವರು ಮುನ್ನುಡಿ ಬರೆದಿದ್ದಾರೆ.

Related posts