ಕಲಬುರಗಿ: ಸಚಿವ ಶರಣಪ್ರಕಾಶ್ ಪಾಟೀಲ್ ಅವರಿಂದ ಕಿರುಕುಳಕ್ಕೊಳಗಾಗಿರುವುದಾಗಿ ಆರೋಪಿಸಿ ಶಿವಕುಮಾರ್ ಎಂಬ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಲಬುರಗಿ ಜಿಲ್ಲೆ ಚಿಂಚೋಳಿ ಸಮೀಪದ ಶಿರೋಳ್ಳಿ ಗ್ರಾಮದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡಿರುವ ರೈತ ಬಿಜೆಪಿ ಕಾರ್ಯಕರ್ತ ಎನ್ನಲಾಗಿದ್ದು, ಕೈ ಕಾರ್ಯಕರ್ತರು ಹಲ್ಲೆ ಮಾಡಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾಗುತ್ತಿರುವುದಾಗಿ ಆಡಿಯೋದಲ್ಲಿ ಹೇಳಿದ್ದಾರೆ ಎನ್ನಲಾಗಿದೆ.
ಆತ್ಮಹತ್ಯೆಗೂ ಮುನ್ನ ಮೂರು ಆಡಿಯೋ ರೆಕಾರ್ಡ್ ಮಾಡಿರುವ ಶಿವಕುಮಾರ್ ತನ್ನ ಸಾವಿಗೆ ಸಚಿವ ಶರಣಪ್ರಕಾಶ್ ಪಾಟೀಲ್ ನೇರ ಕಾರಣ ಎಂದೂ ಆರೋಪಿಸಿದ್ದಾರೆ ಎಂದು ಮಾಧ್ಯಮಗಳು ಬೆಳಕುಚೆಲ್ಲಿವೆ.
ಕಲ್ಬುರ್ಗಿಯಲ್ಲಿ ಸಚಿವ @S_PrakashPatil ಅವರಿಂದ ಇನ್ನಿಲ್ಲದ ಕಿರುಕುಳಕ್ಕೊಳಗಾಗಿದ್ದ ಬಿಜೆಪಿ ಕಾರ್ಯಕರ್ತ ಶಿವಕುಮಾರ್ ಅವರು ಇಂದು ಅನುಮಾನಾಸ್ಪದವಾಗಿ ಸಾವಿಗೀಡಾಗಿದ್ದಾರೆ.
ಶಿವಕುಮಾರ್ ಅವರ ಸಾವಿಗೆ ನೇರ ಹೊಣೆ ಸಚಿವ ಶರಣ ಪ್ರಕಾಶ್ ಪಾಟೀಲ್.
ಸಿಎಂ @siddaramaiah ಅವರು, ಕೂಡಲೇ ಸಚಿವ ಶರಣ ಪ್ರಕಾಶ್ ಪಾಟೀಲ್ರನ್ನು ಸಂಪುಟದಿಂದ ಕೈ… pic.twitter.com/kNgjGvJquI
— BJP Karnataka (@BJP4Karnataka) October 19, 2023
ಸಚಿವರ ರಾಜೀನಾಮೆಗೆ ಬಿಜೆಪಿ ಆಗ್ರಹ:
ಕಲ್ಬುರ್ಗಿಯಲ್ಲಿ ಸಚಿವ ಶರಣ್ ಪ್ರಕಾಶ್ ಪಾಟೀಲ್ ಅವರಿಂದ ಇನ್ನಿಲ್ಲದ ಕಿರುಕುಳಕ್ಕೊಳಗಾಗಿದ್ದ ಬಿಜೆಪಿ ಕಾರ್ಯಕರ್ತ ಶಿವಕುಮಾರ್ ಅವರು ಇಂದು ಅನುಮಾನಾಸ್ಪದವಾಗಿ ಸಾವಿಗೀಡಾಗಿದ್ದಾರೆ ಎಂದು ಆರೋಪಿಸಿರುವ ಬಿಜೆಪಿ, ಶಿವಕುಮಾರ್ ಅವರ ಸಾವಿಗೆ ನೇರ ಹೊಣೆ ಸಚಿವ ಶರಣ ಪ್ರಕಾಶ್ ಪಾಟೀಲ್. ಹಾಗಾಗಿ ಸಿಎಂ ಸಿದ್ದರಾಮಯ್ಯ ಅವರು, ಕೂಡಲೇ ಸಚಿವ ಶರಣ ಪ್ರಕಾಶ್ ಪಾಟೀಲ್ರನ್ನು ಸಂಪುಟದಿಂದ ಕೈ ಬಿಟ್ಟು, ಈ ಕೊಲೆಯ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿದೆ.