ಕಲಮಸ್ಸೆರಿ ಸ್ಫೋಟದ ಪ್ರತಿಧ್ವನಿ; ಕರ್ನಾಟಕದಲ್ಲಿ ಹೈ ಅಲರ್ಟ್

ಮಂಗಳೂರು: ಕೇರಳದ ಕಲಮಸ್ಸೆರಿ ಕನ್ವೆನ್ಷನ್ ಸೆಂಟರ್‌ನಲ್ಲಿ ಭಾನುವಾರ ಸಂಭವಿಸಿದ ಸರಣಿ ಸ್ಫೋಟದ ನಂತರ ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಭಾನುವಾರ ಬೆಳಿಗ್ಗೆ ಕ್ರೈಸ್ತ ಸಮುದಾಯದ ಧಾರ್ಮಿಕ ಕಾರ್ಯಕ್ರಮದ ವೇಳೆ ಸರಣಿ ಸ್ಫೋಟ ಸಂಭವಿಸಿದ್ದು ಓರ್ವ ಸಾವನ್ನಪ್ಪಿ, 37 ಮಂದಿ ಗಾಯಗೊಂಡಿದ್ದಾರೆ.

ಈ ಸರಣಿ ಸ್ಫೋಟದ ಹಿಂದೆ ಉಗ್ರರ ಕೈವಾಡದ ಶಂಕೆ ವ್ಯಕ್ತವಾಗಿದ್ದು ಈ ಬಗ್ಗೆ ಎನ್ಐಎ ತನಿಖೆ ನಡೆಸುತ್ತಿದೆ. ಇದೇ ಸಂದರ್ಭದಲ್ಲಿ ಕರ್ನಾಟಕದ ಗಡಿ ಜಿಲ್ಲೆಗಳಲ್ಲೂ ಕಟ್ಟೆಚ್ಚರಕ್ಕೆ ಸರ್ಕಾರ ಸೂಚಿಸಿದೆ.

ಈ ಕುರಿತು ಹೇಳಿಕೆ ನೀಡಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಕರಾವಳಿ ಭಾಗ ಮತ್ತು ಗಡಿ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ತಿಳಿಸಿದ್ದಾರೆ. ಕರ್ನಾಟಕದಲ್ಲಿ ಇಂತಹ ಘಟನೆ ನಡೆಯಲು ಅವಕಾಶ ನೀಡಲ್ಲ ಎಂದು ಪರಮೇಶ್ವರ್ ಹೇಳಿದ್ದಾರೆ.

Related posts