ಬೆಂಗಳೂರು: ಹುಟ್ಟಿನಿಂದ ಯಾರೂ ಮೇಧಾವಿಗಳಲ್ಲ. ಅವಕಾಶ ಸಿಕ್ಕರೆ ಎಲ್ಲರೂ ಮೇಧಾವಿಗಳಾಗ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.
ಕಾಳಿದಾಸ ಹೆಲ್ತ್ ಆಂಡ್ ಎಜುಕೇಷನ್ ಟ್ರಸ್ಟ್ ಮತ್ತು ಅಹಿಲ್ಯಾ ಫೌಂಡೇಷನ್ ಹಮ್ಮಿಕೊಂಡಿದ್ದ “ಪ್ರೇರಣಾ ಸಮಾರಂಭ” ವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿಭೆ ಒಂದು ಜಾತಿ, ಧರ್ಮಕ್ಕೆ ಸೀಮಿತವಲ್ಲ. ಅವಕಾಶ ಸಿಕ್ಕರೆ, ಶಿಕ್ಷಣದ ಅನುಕೂಲಗಳು ಸಿಕ್ಕರೆ ಎಲ್ಲರ ಪ್ರತಿಭೆಗಳೂ ಹೊರಗೆ ಬರುತ್ತದೆ. ಆದ್ದರಿಂದ ಸ್ವಾಭಿಮಾನಿಗಳಾಗಿ, ಉತ್ತಮ ಪ್ರಜೆಗಳಾಗಿ ಬಾಳಲು ಶಿಕ್ಷಣ ಅತ್ಯಂತ ಅಗತ್ಯ. ಎಲ್ಲರೂ ಶಿಕ್ಷಣ ಪಡೆಯಿರಿ. ಶಿಕ್ಷಣದಿಂದ ವಂಚಿತರಾದವರಿಗೆ ಶಿಕ್ಷಣ ಪಡೆಯಲು ಸಹಕರಿಸಿ ಎಂದು ಕರೆ ನೀಡಿದರು.
ನಮಗೆ ಸಹಕರಿಸಿದ ಸಮಾಜದ ಪರವಾಗಿ ನಾವುಗಳು ಶ್ರಮಿಸಬೇಕು. ಶ್ರಮ ಮತ್ತು ಗುರಿ ಇಲ್ಲದೇ ಹೋದರೆ ಯಾರೂ ಏನನ್ನೂ ಸಾಧಿಸಲು ಸಾಧ್ಯವಿಲ್ಲ ಎಂದರು. ಬ್ರಿಟೀಷರು ಬರುವ ಮೊದಲು ಶೂದ್ರ ಸಮುದಾಯಗಳಿಗೆ ಶಿಕ್ಷಣ, ವಿದ್ಯೆ ನಿಷೇಧಿಸಲಾಗಿತ್ತು. ಮುಂದುವರೆದ ಜಾತಿಗಳ ಹೆಣ್ಣುಮಕ್ಕಳಿಗೂ ಮೊದಲು ವಿದ್ಯೆ ಕೊಡುವಂತಿರಲಿಲ್ಲ. ಅಂಬೇಡ್ಕರ್ ಅವರು ಶೂದ್ರ ಸಮುದಾಯ ಮತ್ತು ಹೆಣ್ಣುಮಕ್ಕಳಿಗೆ ಶಿಕ್ಷಣದ ಹಕ್ಕು ನೀಡಿದರು. ಈ ಚರಿತ್ರೆಯನ್ನು ಸರಿಯಾಗಿ ಅರ್ಥ ಮಾಡಿಕೊಳ್ಳಬೇಕು ಎಂದರು.
ಸಮುದಾಯದಿಂದ ಮೆಡಿಕಲ್ ಕಾಲೇಜು ಮಾಡಬೇಕು ಎನ್ನುವುದು ಅವೈಜ್ಞಾನಿಕ. ಮೆಡಿಕಲ್ ಕಾಲೇಜು ನಡೆಸುವುದು ದುಬಾರಿ ಆದ್ದರಿಂದ ಬಡವರು ಮತ್ತು ಗ್ರಾಮೀಣ ವಿದ್ಯಾರ್ಥಿಗಳಿಗೆ ಉಚಿತ ಸೀಟು ನೀಡಿ ನೆರವಾಗಲು ಸಾಧ್ಯವಿಲ್ಲ. ಆದ್ದರಿಂದ ಪ್ಯಾರಾ ಮೆಡಿಕಲ್ ಕಾಲೇಜುಗಳನ್ನು, ಹಾಸ್ಟೆಲ್ ಗಳನ್ನು ಮತ್ತು ಐಟಿಐ ಗಳನ್ನು ಸಮಾಜದಿಂದ ಆರಂಭಿಸಿದರೆ ಬಡವರು ಮತ್ತು ಗ್ರಾಮೀಣ ಮಕ್ಕಳಿಗೆ ನೆರವಾಗುತ್ತದೆ ಎಂದರು.
ನಾನು ಬಿಎಸ್ಸಿ ಓದುವಾಗ ಹೋಟೆಲ್ ನಿಂದ ಸಾರು ತಂದು ರೂಮಲ್ಲಿ ಅನ್ನ ಮಾಡಿಕೊಂಡು ಊಟ ಮಾಡಬೇಕಿತ್ತು. ಇಂಥಾ ಸ್ಥಿತಿಯಲ್ಲಿ ಸಹಸ್ರಾರು ವಿದ್ಯಾರ್ಥಿಗಳು ಇರುವುದರಿಂದ ನಾನು ವಿದ್ಯಾಸಿರಿ ಕಾರ್ಯಕ್ರಮ ಜಾರಿಗೆ ತಂದೆ ಎಂದು ನುಡಿದರು.
ಮುಖ್ಯಮಂತ್ರಿ @siddaramaiah ಅವರು ಕಾಳಿದಾಸ ಹೆಲ್ತ್ ಆಂಡ್ ಎಜುಕೇಷನ್ ಟ್ರಸ್ಟ್ ಮತ್ತು ಅಹಿಲ್ಯಾ ಫೌಂಡೇಷನ್ ಹಮ್ಮಿಕೊಂಡಿದ್ದ "ಪ್ರೇರಣಾ ಸಮಾರಂಭ"ವನ್ನು ಉದ್ಘಾಟಿಸಿ, ಹಿಂದುಳಿದ ವರ್ಗಗಳ ವೈದ್ಯ ವಿದ್ಯಾರ್ಥಿಗಳನ್ನು ಸನ್ಮಾನಿಸಿ, ವಿದ್ಯಾರ್ಥಿ ವೇತನ ವಿತರಿಸಿದರು.
ಕನಕ ಗುರುಪೀಠದ ಸಿದ್ದರಾಮಾನಂದ ಸ್ವಾಮೀಜಿಗಳ ದಿವ್ಯ ಸಾನ್ನಿಧ್ಯದಲ್ಲಿ ನಡೆದ… pic.twitter.com/bf3hYD3cxv— CM of Karnataka (@CMofKarnataka) October 29, 2023