ಹಾಸ್ಯ ನಟ ಬುಲೆಟ್ ಪ್ರಕಾಶ್ ಇನ್ನಿಲ್ಲ; ಕಂಬನಿಯ ಮಹಾಪೂರ

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟ ಬುಲೆಟ್ ಪ್ರಕಾಶ್ ಇನ್ನಿಲ್ಲ. ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ 44 ವರ್ಷ ವಯಸ್ಸಿನ ನಟ ಬುಲೆಟ್ ಪ್ರಕಾಶ್ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಈ ಸುದ್ದಿ ತಿಳಿಯುತ್ತಿದ್ದಂತೆಯೇ ಕನ್ನಡ ಚಿತ್ರರಂಗದ ಗಣ್ಯರು ಆಸ್ಪತ್ರೆಯತ್ತ ದೌಡಾಯಿಸಿದ್ದಾರೆ.

ಹಲವು ದಿನಗಳಿಂದ ಕಿಡ್ನಿ ಹಾಗೂ ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದ ಹಾಸ್ಯ ನಟ ಬುಲೆಟ್ ಪ್ರಕಾಶ್ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆರೋಗ್ಯ ಸ್ಥಿತಿ ಗಂಭೀರವಾಗಿದ್ದರಿಂದ ಅವರಿಗೆ ಕೃತಕ ಉಸಿರಾಟದ ವ್ಯವಸ್ಥೆ ಮಾಡಿ ಚಿಕಿತ್ಸೆ ನೀಡಲಾಗುತ್ತಿತ್ತು.
ಸಿನಿಮಾ ನಟನಾಗಿಯಷ್ಟೇ ಅಲ್ಲ, ಬಿಜೆಪಿಯಲ್ಲೂ ಗುರುತಿಸಿಕೊಂಡಿರುವ ಬುಲೆಟ್ ಪ್ರಕಾಶ್ ಅವರ ಆರೋಗ್ಯದಲ್ಲಿ ಕಳೆದೊಂದು ತಿಂಗಳಿನಿಂದ ಏರುಪೇರಾಗಿತ್ತು. ಆಸ್ಪತ್ರೆಗೆ ದಾಖಲಾದ ನಂತರವೂ ಕಿಡ್ನಿ ಹಾಗೂ ಲಿವರ್ ಸಮಸ್ಯೆಯಿಂದ ಅವರು ಚೇತರಿಸಿಕೊಳ್ಳಲಾಗಿಲ್ಲ. ವಿವಿಧ ಆಸ್ಪತ್ರೆಗಳಲ್ಲಿ ದಾಖಲಾಗಿದ್ದರೂ ಚೇತರಿಸಿಕೊಳ್ಳದ ಕಾರಣ ಶನಿವಾರ ಆಸ್ಪತ್ರೆಗೆ ಅವರನ್ನು ಸೇರಿಸಲಾಗಿತ್ತು.

ಆಸ್ಪತ್ರೆಗೆ ಭೀತಿ ನೀಡಿರುವ ನಟ ದುನಿಯಾ ವಿಜಯ್ ಕೂಡಾ ವೈದ್ಯರೊಂದಿಗೆ ಮಾತನಾಡಿದರು.. ಬುಲೆಟ್ ಪ್ರಕಾಶ್ ಕುಟುಂಬ ಸದಸ್ಯರೊಂದಿಗೂ ಮಾತನಾಡಿದ ಅವರು ಸಾಂತ್ವನ ಹೇಳಿದರು. ನಿರ್ದೇಶಕ ಯೋಗರಾಜ್ ಭಟ್ ಸಹಿತ ಅನೇಕ ನಟರು ಬುಲೆಟ್ ಪ್ರಕಾಶ್ ನಿಧಾನಕ್ಕೆ ಕಂಬನಿ ಮಿಡಿದಿದ್ದಾರೆ.

ಎರಡು ವರ್ಷಗಳಿಂದ ಆರೋಗ್ಯ ಸಮಸ್ಯೆ?

325 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದ ಬುಲೆಟ್ ಪ್ರಕಾಶ್ ಅವರು ಎರಡು ವರ್ಷಗಳ ಹಿಂದೆ ತೂಕ ಇಳಿಸಿಕೊಳ್ಳಲು ಶಸ್ತ್ರ ಚಿಕಿತ್ಸೆ ಮಾಡಿಸಿಕೊಂಡಿದ್ದರು ಎನ್ನಲಾಗಿದೆ. ಶಸ್ತ್ರ ಚಿಕಿತ್ಸೆ ನಂತರ ಹಲವು ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದರು ಎಂದು ಹೇಳಲಾಗುತ್ತಿದೆ. ಶಸ್ತ್ರ ಚಿಕಿತ್ಸೆಯ ನಂತರ ಸಿನಿಮಾಗಳಲ್ಲಿ ನಟಿಸಲು ಅವರಿಂದ ಸಾಧ್ಯವಾಗುತ್ತಿಲ್ಲ ಎಂದು ಅವರ ಆಪ್ತರು ಹೇಳಿಕೊಂಡಿದ್ದಾರೆ. ತನ್ನ ಈ ಸ್ಥಿತಿಯಿಂದಾಗಿ ಈ ನಟ ಮಾನಸಿಕವಾಗಿ ಬಹಳ ನೊಂದಿದ್ದಾರೆಂದು ಅವರ ಆಪ್ತರು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ.. ಕೊರೋನಾ ಪೀಡಿತ ಗಾಯಕಿ ಆಸ್ಪತ್ರೆಯಿಂದ ಡಿಸ್ಚಾರ್ಜ್

Related posts