ದೆಹಲಿ: ಕನ್ನಡ ರಾಜ್ಯೋತ್ಸವ ಅಂಗವಾಗಿ ನಾಡಿನೆಲ್ಲೆಡೆ ಭುವನೇಶ್ವರಿ ಕೈಂಕರ್ಯ ಸಾಗಿದೆ. ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರೂ ರಾಜ್ಯೋತ್ಸವ ಸಂಭ್ರಮದಲ್ಲಿ ಮಿಂದೆದ್ದಿದ್ದಾರೆ.
ಈ ಕನ್ನಡ ರಾಜ್ಯೋತ್ಸವದಂದು ನಾವು ಕರ್ನಾಟಕದ ಚೈತನ್ಯವನ್ನು ಸಂಭ್ರಮಿಸುತ್ತಿದ್ದೇವೆ ಎಂದವರು ಹೇಳಿಕೊಂಡಿದ್ದಾರೆ. ಕರುನಾಡಿನ ಬಗ್ಗೆ ತಮ್ಮದೇ ಶೈಲಿಯಲ್ಲಿ ವರ್ಣನೆ ಮಾಡಿರುವ ಪ್ರಧಾನಿಯವರು, ‘ಪ್ರಾಚೀನ ಆವಿಷ್ಕಾರ ಮತ್ತು ಆಧುನಿಕ ಉದ್ಯಮದ ತೊಟ್ಟಿಲು ಕರ್ನಾಟಕ. ಪ್ರೀತಿ ಮತ್ತು ಬುದ್ಧಿವಂತಿಕೆ ಎರಡರ ಮಿಳಿತವಾಗಿರುವ ಕನ್ನಡಿಗರು, ಕರ್ನಾಟಕ ರಾಜ್ಯವು ಶ್ರೇಷ್ಠತೆಯ ಕಡೆಗೆ ಸತತ ಮುನ್ನಡೆಯುವಂತೆ ಉತ್ತೇಜಿಸುತ್ತಿದ್ದಾರೆ’ ಎಂದು ಹಾಡಿ ಹೊಗಳಿದ್ದಾರೆ. ‘ಕರ್ನಾಟಕ ಮತ್ತಷ್ಟು ಪ್ರವರ್ಧಮಾನಕ್ಕೆ ಬರಲಿ, ಇನ್ನಷ್ಟು ನಾವೀನ್ಯತೆಯೊಂದಿಗೆ ಎಲ್ಲರಿಗೂ ಸ್ಫೂರ್ತಿಯಾಗಲಿ’ ಎಂದೂ ಅವರು ಶುಭ ಹಾರೈಸಿದ್ದಾರೆ.
ಈ ಕನ್ನಡ ರಾಜ್ಯೋತ್ಸವದಂದು ನಾವು ಕರ್ನಾಟಕದ ಚೈತನ್ಯವನ್ನು ಸಂಭ್ರಮಿಸುತ್ತಿದ್ದೇವೆ. ಪ್ರಾಚೀನ ಆವಿಷ್ಕಾರ ಮತ್ತು ಆಧುನಿಕ ಉದ್ಯಮದ ತೊಟ್ಟಿಲು ಕರ್ನಾಟಕ. ಪ್ರೀತಿ ಮತ್ತು ಬುದ್ಧಿವಂತಿಕೆ ಎರಡರ ಮಿಳಿತವಾಗಿರುವ ಕನ್ನಡಿಗರು, ಕರ್ನಾಟಕ ರಾಜ್ಯವು ಶ್ರೇಷ್ಠತೆಯ ಕಡೆಗೆ ಸತತ ಮುನ್ನಡೆಯುವಂತೆ ಉತ್ತೇಜಿಸುತ್ತಿದ್ದಾರೆ. ಕರ್ನಾಟಕ ಮತ್ತಷ್ಟು…
— Narendra Modi (@narendramodi) November 1, 2023
ಇದೇ ವೇಳೆ, ಸಿಎಂ ಸಿದ್ದರಾಮಯ್ಯ ಕೂಡಾ ತಮ್ಮದೇ ದಾಟಿಯಲ್ಲಿ ರಾಜ್ಯೋತ್ಸವ ಶುಭಾಶಯ ಹಂಚಿಕೊಂಡಿದ್ದಾರೆ. ‘ಭಾಷೆ ಎಂದರೆ ಅಸ್ಮಿತೆ, ಭಾಷೆ ಎಂದರೆ ಬದುಕು. ಭಾಷೆಯನ್ನು ಉಳಿಸುವುದು ಎಂದರೆ ಬಳಸುವುದೇ ಆಗಿದೆ. ಈ ನಾಡಿನಲ್ಲಿ ನೆಲೆಸಿರುವ ಪ್ರತಿಯೊಬ್ಬರು ಕನ್ನಡ ಭಾಷೆಯನ್ನು ಬಳಸುವ ಮೂಲಕ ಬೆಳೆಸಬೇಕು’ ಎಂದು ಅವರು ರಾಜ್ಯೋತ್ಸವ ಸಂದೇಶದಲ್ಲಿ ಮನವಿ ಮಾಡಿದ್ದಾರೆ..
ಭಾಷೆ ಎಂದರೆ ಅಸ್ಮಿತೆ, ಭಾಷೆ ಎಂದರೆ ಬದುಕು.
ಭಾಷೆಯನ್ನು ಉಳಿಸುವುದು ಎಂದರೆ ಬಳಸುವುದೇ ಆಗಿದೆ. ಈ ನಾಡಿನಲ್ಲಿ ನೆಲೆಸಿರುವ ಪ್ರತಿಯೊಬ್ಬರು ಕನ್ನಡ ಭಾಷೆಯನ್ನು ಬಳಸುವ ಮೂಲಕ ಬೆಳೆಸಬೇಕು ಎಂದು ಮನವಿ ಮಾಡುತ್ತೇನೆ.ಕನ್ನಡ ರಾಜ್ಯೋತ್ಸವ ಕನ್ನಡಿಗರ ಬಾಳಿನ ನಿತ್ಯೋತ್ಸವವಾಗಲಿ.
ಸಮಸ್ತ ಕನ್ನಡಿಗರಿಗೂ ೬೮ನೇ ಕನ್ನಡ ರಾಜ್ಯೋತ್ಸವದ ಶುಭಾಶಯಗಳು.… pic.twitter.com/b8F5uVZzHZ— Siddaramaiah (@siddaramaiah) November 1, 2023