ಕಾರವಾರ: ಕರ್ನಾಟಕ ಮತ್ತು ಗೋವಾ ರಾಜ್ಯಗಳನ್ನು ಸಂಪರ್ಕಿಸುವ ಸೇತುವೆ ಕುಸಿದು ಬಿದ್ದಿದ್ದು ವಾಹನ ಸಂಚಾರ ಏರುಪೇರಾಗಿದೆ. ಉತ್ತರಕನ್ನಡ ಜಿಲ್ಲೆ ಕಾರವಾರ ನಗರದ ಕೋಡಿಭಾಗ್ ನಲ್ಲಿ ಕಾಳಿ ನದಿಗೆ ಅಡ್ಡಲಾಗಿ ಸುಮಾರು 40 ವರ್ಷಗಳ ಹಿಂದೆ ನಿರ್ಮಾಣಗೊಂಡಿದ್ದ ಹಳೆಯ ಸೇತುವೆ ಕಳೆದ ರಾತ್ರಿ ಕಿಸಿದುಬಿದ್ದಿದೆ.
ಕಾರವಾರ-ಸದಾಶಿವಗಡ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸುಮಾರು 50 ವರ್ಷಗಳ ಹಿಂದೆ ನಿರ್ಮಿತವಾದ ಕಾಳಿ ಸೇತುವೆ ಕುಸಿದು ಬಿದ್ದು , ಲಾರಿ ಮುಳುಗಡೆ ಯಾಗಿರುವ ಘಟನೆ ನಡೆದಿದೆ…
ಕಾರವಾರ-ಗೋವಾ ಸಂಚಾರ ಬಂದ್ ಮಾಡಿ ಎಂದು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.. pic.twitter.com/p9IZB5Q1mD— ಎ ಜೆ ಕ್ರಿಯೇಷನ್ಸ್ (@AjUniversal1) August 7, 2024
ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾಳಿ ನದಿಗೆ ಒಂದು ಹೊಸ ಸೇತುವೆ ನಿರ್ಮಾಣ ಮಾಡಲಾಗಿತ್ತು. ಪಕ್ಕದಲ್ಲೇ ಹಳೆ ಸೇತುವೆಯನ್ನೂ ವಾಹನಗಳ ಸಂಚಾರಕ್ಕೆ ಬಳಸಲಾಗುತ್ತಿತ್ತು. ಈ ಹಳೆಯ ಸೇತುವೆ ಮಧ್ಯ ರಾತ್ರಿ 1 ಗಂಟೆ ಸುಮಾರಿಗೆ ಏಕಾಏಕಿ ಕುಸಿದಿದೆ. ಆ ವೇಳೆ ಸೇತುವೆ ಮೇಲೆ ಸಂಚರಿಸುತ್ತಿದ್ದ ಲಾರಿ ನದಿ ಪಾಲಾಗಿದೆ. ಲಾರಿಯ ಮುಂಭಾಗದ ಗ್ಲಾಸ್ ಒಡೆದು ಕ್ಯಾಬಿನ್ ಮೇಲೆ ನಿಂತು ಚಾಲಕ ಬಾಲ ಮುರುಗನ್ ರಕ್ಷಣೆಗೆ ಕೂಗಿದ್ದಾರೆ. ಸ್ಥಳೀಯ ಮೀನುಗಾರರ ನೆರವಿನೊಂದಿಗೆ ಕಾರ್ಯಾಚರಣೆಗಿಳಿದ ಪೊಲೀಸರು ಚಾಲಕನನ್ನು ರಕ್ಷಿಸಿದ್ದಾರೆ.