ಐದು ರಾಜ್ಯಗಳ ಜನರಿಗೆ ಕರ್ನಾಟಕ ಪ್ರವೇಶ ನಿರ್ಬಂಧ; ಪ್ರತಿಪಕ್ಷ ಆಕ್ಷೇಪ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈಗಾಗಲೇ ಹೆಚ್ಚು ಸೋಂಕಿತರಿರುವ ಮಹಾರಾಷ್ಟ್ರ, ತಮಿಳುನಾಡು, ಗುಜರಾತ್, ಮಧ್ಯಪ್ರದೇಶ, ಹಾಗೂ ರಾಜಸ್ತಾನದಿಂದ ರಾಜ್ಯಗಳಿಂದ ಕರ್ನಾಟಕಕ್ಕೆ ಬರುವ ಪ್ರಯಾಣಿಕರಿಗೆ ಗಡಿ ಬಂದ್ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. .

ಗುಜರಾತ್, ಮಹಾರಾಷ್ಟ್ರ, ತಮಿಳುನಾಡು, ಮಧ್ಯಪ್ರದೇಶ, ಹಾಗೂ ರಾಜಸ್ತಾನದಿಂದ ಬರುವ ಪ್ರಯಾಣಿಕ ವಿಮಾನಗಳನ್ನು
ಮುಂದಿನ 15 ದಿನಗಳ ಕಾಲ ನಿರ್ಬಂಧ ವಿಧಿಸಲು ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದ್ದಾರೆ.

ರಾಜ್ಯ ಸರ್ಕಾರದ ಈ ನಿರ್ಧಾರಕ್ಕೆ ಪ್ರತಿಪಕ್ಷ ಕಾಂಗ್ರೆಸ್ ಆಕ್ಷೇಪ ವ್ಯಕ್ತಪಡಿಸಿದೆ. ದೇಶದೊಳಗೆ ಈ ರೀತಿಯ ನಿರ್ಬಂಧ ಸರಿಯಲ್ಲ ಎಂದು ಕಾಂಗ್ರೆಸ್ ನಾಯಕರು ರಾಜ್ಯ ಸರ್ಕಾರಕ್ಕೆ ಕಿವಿಮಾತು ಹೇಳಿದ್ದಾರೆ.

ಇದನ್ನೂ ಓದಿ.. ಲಾಕ್’ಡೌನ್-5.0; ಮೇ 31ರ ಮೋದಿ ಮಾತಿನತ್ತ ಎಲ್ಲರ ಚಿತ್ತ 

 

Related posts