ಹೆಚ್ಡಿಕೆ ಪುತ್ರ ನಿಖಿಲ್’ಗೆ ಈ ಬಾರಿಯೂ ಒಲಿಯದ ಜಯ

ರಾಮನಗರ: ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗ ನಿಖಿಲ್ ಕುಮಾರಸ್ವಾಮಿ ಅವರ ಕನಸು ಮತ್ತೆ ಭಗ್ನವಾಗಿದೆ. ರಾಮನಗರ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ನಿಖಿಲ್ ಕುಮಾರಸ್ವಾಮಿ ಅವರು ಹೀನಾಯವಾಗಿ ಸೋಲುಂಡಿದ್ದಾರೆ. ಪ್ರತಿಸ್ಪರ್ದಿ ಕಾಂಗ್ರೆಸ್ ಹುರಿಯಾಳು ಇಕ್ಬಾಲ್ ಹುಸೇನ್ ವಿರುದ್ಧ ನಿಖಿಲ್ ಭಾರೀ ಮತಗಳ ಅಂತರದಿಂದ ಸೋಲು ಅನುಭವಿಸಿದ್ದಾರೆ.

ಮಾಜಿ ಸಿಎಂ ಕುಮಾರಸ್ವಾಮಿ ಅವರು ಈ ಬಾರಿಯಾದರೂ ತಮ್ಮ ಪುತ್ರ ನಿಖಿಲ್ ಕುಮಾರಸ್ವಾಮಿಯನ್ನು ಶಾಸಕನನ್ನಾಗಿ ಮಾಡಬೇಕೆಂಬ ಪ್ರಯತ್ನದಲ್ಲಿದ್ದರು. ಆದರೆ ಈ ಪ್ರಯತ್ನ ಫಲ ಕಾಣಲಿಲ್ಲ. ಕಳೆದ ಲೋಕಸಭೆಯಲ್ಲಿ ಸ್ಪರ್ಧಿಸಿದ್ದ ನಿಖಿಲ್ ಅವರಿಗೆ ವಿಜಯಲಕ್ಷ್ಮಿ ಒಲಿದಿರಲಿಲ್ಲ, ಇದೀಗ ಈಬಾರಿಯ ವಿಧಾನಸಭಾ ಚುನಾವಣೆಯಲ್ಲೂ ನಿಖಿಲ್ ಅವರು ಸೋಲುಂಡಿದ್ದಾರೆ.

Related posts