ರಾಜ್ಯದಲ್ಲಿ ಮುಂಗಾರು ಮತ್ತೆ ಚುರುಕು; ಆಗಸ್ಟ್ 20ರಿಂದ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮತ್ತೆ ಚುರುಕಾಗಲಿದೆ. ಕರ್ನಾಟಕದಾದ್ಯಂತ ಆಗಸ್ಟ್​ 20ರಿಂದ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

  • ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಬಹುತೇಕ ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆಗಳಿವೆ.
  • ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆ ವ್ಯಕ್ತವಾಗಿದೆ.
  • ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಮೈಸೂರು, ರಾಮನಗರ ಸಹಿತ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಆಗಸ್ಟ್ 20ರ ನಂತರ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ವಿಶ್ಲೇಷಿಸಿದೆ.

Related posts