ಜೂನ್ 25ರಿಂದ SSLC ಪರೀಕ್ಷೆ.. ಇಲ್ಲಿದೆ ವೇಳಾಪಟ್ಟಿ

ಬೆಂಗಳೂರು: ರಾಜ್ಯದ ಎಸ್ಸೆಸ್ಸೆಲ್ಸಿ ಪರೀಕ್ಷಾ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಜೂನ್ 25 ರಿಂದ ಜುಲೈ 4ರ ವರೆಗೆ ಪರೀಕ್ಷೆ ನಡೆಯಲಿದೆ.

ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಕುರಿತಂತೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ ಕುಮಾರ್ ವಿವರ ಒದಗಿಸಿದರು.  ಆರೋಗ್ಯಾಧಿಕಾರಿಗಳ ಸಲಹೆ ಪಡೆದೆ ಪರೀಕ್ಷೆ ನಡೆಸುವ ಬಗ್ಗೆ ಸರ್ಕಾರ ನಿರ್ಧಾರ ಕೈಗೊಂಡಿದೆ ಎಂದ ಸಚಿವರು, ಪರೀಕ್ಷೆಗಾಗಿ 2879 ಕೇಂದ್ರಗಳಲ್ಲಿ 43720 ಕೊಠಡಿಗಳನ್ನು ಸಜ್ಜುಗೊಳಿಸಲಾಗುತ್ತದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಅನುಕೂಲವಾಗುವ ರೀತಿಯಲ್ಲಿ ಪರೀಕ್ಷಾರ್ಥಿ ವಿದ್ಯಾರ್ಥಿಗಳಿಗೆ ಆಸನ ವ್ಯವಸ್ಥೆ ಮಾಡಲಾಗುತ್ತದೆ ಎಂದವರು ತಿಳಿಸಿದರು.

ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಮಾಸ್ಕ್ ಧರಿಸಲೇಬೇಕು. ಎಲ್ಲಾ ಶಾಲೆಗಳಲ್ಲೂ ಸ್ಯಾನಿಟೈಸರ್ ವ್ಯವಸ್ಥೆ ಮಾಡಲಾಗುತ್ತದೆ. ಎಂಬೆಸಿ ಸಂಸ್ಥೆಯು ಈ ಸ್ಯಾನಿಟೈಸರ್ ವ್ಯವಸ್ಥೆ ಮಾಡಲು ಸ್ವಯಂ ಪ್ರೇರಿತವಾಗಿ ಮುಂದೆ ಬಂದಿದೆ. ಪರೀಕ್ಷೆ ಆರಂಭಕ್ಕೆ ಮುನ್ನ ಕೊಠಡಿಗಳಲ್ಲಿ ಈ ಸ್ಯಾನಿಟೈಸರ್ ವ್ಯವಸ್ಥೆಮಾಡಲಾಗುತ್ತದೆ. ಎಲ್ಲಾ ವಿದ್ಯಾರ್ಥಿಗಳನ್ನು ಥರ್ಮಲ್ ಸ್ಕ್ರೀನಿಂಗ್ ಪರಿಶೀಲನೆ ನಂತರವೇ ಪರೀಕ್ಷಾ ಕೇಂದ್ರಕ್ಕೆ ಪ್ರವೇಶ ನೀಡಲಾಗುವುದು. ಪ್ರತೀ ಪರೀಕ್ಷಾ ಕೇಂದ್ರದಲ್ಲೂ ಪ್ರತೀ ದಿನವೂ ಆರೋಗ್ಯ ಸಿಬ್ಬಂದಿಯು ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ಮಾಡಲಿದ್ದು, ಆರೋಗ್ಯ ಸಮಸ್ಯೆ ಇರುವವರಿಗೆ ಪ್ರತ್ಯೇಕ ಪರೀಕ್ಷಾ ವ್ಯವಸ್ಥೆ ಮಾಡಲಾಗುವುದು ಎಂದು ಸಚಿವ ಸುರೇಶ ಕಿಮಾರ್ ತಿಳಿಸಿದರು.

ಇದೇ ವೇಳೆ, ಜೂನ್ 18 ರಂದು ಬಾಕಿ ಉಳಿದಿರುವ ದ್ವಿತೀಯ ಪಿಯುಸಿ ಇಂಗ್ಲಿಷ್  ಪರೀಕ್ಷೆ ನಡೆಯಲಿದೆ ಎಂದು ಅವರು ತಿಳಿಸಿದರು.

ಇದನ್ನೂ ಓದಿ.. ರಾಜ್ಯದ ಜನತೆಗೆ ಗುಡ್ ನ್ಯೂಸ್.. ಬಸ್-ಆಟೋ-ಟ್ಯಾಕ್ಸಿ ಸೇವೆ ಆರಂಭ, ಸಲೂನ್ ಕೂಡಾ ಓಪನ್

 

Related posts