ಕಲಬುರಗಿ: ಕೆಇಎ ಪರೀಕ್ಷಾ ಅಕ್ರಮ ಪ್ರಕರಣದಲ್ಲಿ ಸಿಲುಕಿರುವ ಪ್ರಮುಖ ಆರೋಪಿ ಆರ್.ಡಿ ಪಾಟೀಲ್ ಹಾಗೂ ಇತರ ಆರೋಪಿಗಳಿಗೆ ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.
ಬಂಧಿತ ಆರೋಪಿಗಳಾದ ಆರ್ ಡಿ ಪಾಟೀಲ್, ಸಲೀಂ ಹಾಗೂ ಸಂತೋಷನನ್ನು 2ನೇ ಜೆಎಂಎಫ್ ಸಿ ಕೋರ್ಟ್’ಗೆ ಹಾಜರುಪಡಿಸಿದ ಅಶೋಕನಗರ ಠಾಣೆ ಪೊಲೀಸರು ಹೆಚ್ಚಿನ ವಿಚಾರಣೆಗಾಗಿ ತಮ್ಮ ವಶಕ್ಕೆ ನೀಡುವಂತೆ ಮನವಿ ಮಾಡಿದ್ದರು. ಆದರೆ ನ್ಯಾಯಾಲಯವು ಆರೊಪಿಗಳನ್ನು ಮೂವರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿದ್ದಾರೆ.