ಜನಸಾಗರದ ಜಯಘೋಷದ ನಡುವೆ ಮೂರನೇ ಬಾರಿಗೆ ಗದ್ದುಗೆ ಏರಿದ ಕೆಜ್ರಿವಾಲ್

ದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಜಯಭೇರಿ ಬಾರಿಸಿದ್ದು ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಮೂರನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಮಲೀಲಾ ಮೈದಾನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರಮಾಣವಚನ ಸ್ವೀಕರಿಸಿದರು.

ಜನಸಾಗರದ ನಡುವೆ, ಕಾರ್ಯಕರ್ತರ ಜಯಘೋಷದ ನಡುವೆ ಯಾರನ್ನು ಕೇಜ್ರಿವಾಲ್ ದೆಹಲಿಯ ಸಿಎಂ ಗದ್ದುಗೆ ಏರಿದರು. ಅವರಿಗೆ ಅಭಿನಂದನೆಗಳ ಮಹಾಪೂರವೇ ಹರಿದುಬಂತು.

ಫೆಬ್ರವರಿ 8ರಂದು ದೆಹಲಿ ವಿಧಾನಸಭೆಗೆ ಚುನಾವಣೆ ಮತದಾನ ನಡೆದಿತ್ತು. 70 ಸ್ಥಾನಗಳ ಪೈಕಿ ಆಮ್ ಆದ್ಮಿ ಪಕ್ಷ 62 ಸ್ಥಾನಗಳನ್ನೂ ಗೆದ್ದು ಮೂರನೇ ಬಾರಿಗೆ ಅಧಿಕಾರಕ್ಕೇರುತ್ತಿದೆ. ಬಿಜೆಪಿ 8 ಸ್ಥಾನಗಳಿಗೆ ತೃಪ್ತಿಪಟ್ಟುಕೊಂಡಿದೆ.

Related posts