ಬೆಂಗಳೂರು: ಸುಮಾರು 48 ವರ್ಷಗಳ ರಾಜಕೀಯ ಬದುಕಿನಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಯವರಿಗೆ ರಾಜಕೀಯ ಪುನರ್ಜನ್ಮ ಸಿಗುತ್ತಿದೆ. ಲೋಕಸಭೆಯ ಮಾಜಿ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಈ ಬಾರಿ ರಾಜ್ಯಸಭಾ ಅಭ್ಯರ್ಥಿಯನ್ನಾಗಿ ಕಾಂಗ್ರೆಸ್ ಕಣಕ್ಕಿಳಿಸಲಿದೆ.
ಕಳೆದ ಲೋಕಸಭಾ ಚುನಾವಣೆಯಲ್ಲಿ ಕಲಬುರ್ಗಿ ಕ್ಷೇತ್ರದಲ್ಲಿ ಸೋಲುಂಡಿದ್ದ ಖರ್ಗೆಯವರನ್ನು ಮೇಲ್ಮನೆಗೆ ಕಳುಹಿಸಬೇಕೆಂದು ಕೈ ನಾಯಕರು ಹಲವು ತಿಂಗಳ ಹಿಂದೆಯೇ ಚಿಂತನೆ ನಡೆಸಿತ್ತು. ಇದೀಗ ಚುನಾವಣಾ ಘೋಷಣೆಯಾಗುತ್ತಿದ್ದಂತೆಯೇ ಎಲ್ಲಾ ಟಿಕೆಟ್ ಆಕಾಂಕ್ಷಿಗಳ ಹೆಸರನ್ನು ದೂರಕ್ಕೆ ಸರಿಸಿದ ಕಾಂಗ್ರೆಸ್ ಹೈಕಮಾಂಡ್ ಖರ್ಗೆಯವರ ಹೆಸರನ್ನೇ ಅಂತಿಮಗೊಳಿಸಿದೆ. ಒಂದು ವೇಳೆ ಖರ್ಗೆಯವರು ಆಯ್ಕೆಯಾದರೆ ಅವರು ಇದೇ ಮೊದಲ ಸಲ ರಾಜ್ಯಸಭೆ ಪ್ರಪ್ರವೇಶಿಸಲಿದ್ದಾರೆ.
ಧ್ಯೇಯವಾದಿ ಕಾಂಗ್ರೆಸಿಗ, ರಾಜಕೀಯ, ಆಡಳಿತ ಕ್ಷೇತ್ರಗಳಲ್ಲಿ ಅಪಾರ ಅನುಭವ ಹೊಂದಿರುವ ಹಿರಿಯ ನಾಯಕ, ರಾಜ್ಯಸಭಾ ಚುನಾವಣೆಗೆ ಕರ್ನಾಟಕದ ಕಾಂಗ್ರೆಸ್ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಶ್ರೀ ಮಲ್ಲಿಕಾರ್ಜುನ ಖರ್ಗೆಯವರಿಗೆ ಅಭಿನಂದನೆಗಳು.
Best wishes to Shri. Mallikarjuna Kharge for being nominated as the candidate for RS polls pic.twitter.com/6SBYGHWHZA
— DK Shivakumar (@DKShivakumar) June 5, 2020