ಕೊಮ್ಮಘಟ್ಟದಲ್ಲಿ ಬಿಜೆಪಿ ಶಕ್ತಿಪ್ರದರ್ಶನ; ಫಲಾನುಭವಿಗಳ ಸಮಾವೇಶದ ಸಿದ್ದತೆ ಪರಿಶೀಲಿಸಿದ ಸಚಿವ ST ಸೋಮಶೇಖರ್ 

ಬೆಂಗಳೂರು: ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ವಿವಿಧ ಯೋಜನೆಗಳ ಫಲಾನುಭವಿಗಳ ಸಮಾವೇಶ ನಡೆಯುವ ಸ್ಥಳಕ್ಕೆ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು, ಯಶವಂತಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಸ್.ಟಿ.ಸೋಮಶೇಖರ್ ಅವರು ಭೇಟಿ ನೀಡಿ ಸಿದ್ಧತೆಗಳನ್ನು ಪರಿಶೀಲಿಸಿದರು.

ಕೇಂದ್ರ ಗೃಹ ಹಾಗೂ ಸಹಕಾರ ಸಚಿವರಾದ ಅಮಿತ್ ಶಾ ಅವರು ಕೆಂಗೇರಿ ಉಪನಗರ, ಕೊಮ್ಮಘಟ್ಟ ಮೈದಾನಕ್ಕೆ ಶುಕ್ರವಾರ ಮಧ್ಯಾಹ್ನ ಆಗಮಿಸಿ ಫಲಾನುಭವಿಗಳ ಸಮಾವೇಶದಲ್ಲಿ ಫಲಾನುಭವಿಗಳಿಗೆ ವಿವಿಧ ಸವಲತ್ತುಗಳನ್ನು ವಿತರಣೆ ಮಾಡುವ ಜೊತೆಗೆ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳನ್ನು ಉದ್ಘಾಟಿಸಲಿದ್ದಾರೆ.

75 ಸಾವಿರಕ್ಕೂ ಅಧಿಕ ಸಂಖ್ಯೆಯಲ್ಲಿ ಜನ ಸೇರಲಿರುವುದರಿಂದ ಭದ್ರತೆ ಹಾಗೂ ಪೂರ್ವಸಿದ್ಧತೆಗಳ ಕುರಿತು ಸಚಿವ ಎಸ್.ಟಿ.ಸೋಮಶೇಖರ್ ಪರಿಶೀಲನೆ ನಡೆಸಿದರು. ಯಾವುದೇ ಅಹಿತಕರ ಘಟನೆ ನಡೆಯದಂತೆ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಶಿಷ್ಟಾಚಾರ ಉಲ್ಲಂಘನೆಯಾಗದಂತೆ ನೋಡಿಕೊಳ್ಳಬೇಕು ಎಂದು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.

Related posts