ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಾಣು ಹಾವಳಿ ಪರಿಸ್ಥಿಗೆ ಸವಾಲಾಗಿ ಪರಿಣಮಿಸಿದೆ. ಹೈದರಾಬಾದ್ ಕರ್ನಾಟಕ ಭಾಗದಲ್ಲೂ ಸೋಂಕು ವೇಗವಾಗಿ ಹಬ್ಬುತ್ತಿದೆ.
ಈ ನಡುವೆ, ಕೊಪ್ಪಳ ಮೆಡಿಕಲ್ ಕಾಲೇಜು ಪ್ರತೀ ದಿನ 1000 ಕೋವಿಡ್ ಪರೀಕ್ಷೆಗಳನ್ನು ನಡೆಸುತ್ತಿದೆ. ಈ ಕುರಿತಂತೆ ಟ್ವೀಟ್ ಮಾಡಿರುವ ವೈದ್ಯಕೀಯ ಶಿಕ್ಷಣ ಸಚಿವ ಕೆ. ಸುಧಾಕರ್ ಕೊಪ್ಪಳ ಮೆಡಿಕಲ್ ಕಾಲೇಜು ಸಾಧನೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಕೊಪ್ಪಳದ ಮೆಡಿಕಲ್ ಕಾಲೇಜು ಕೆಲ ಕುಂದು ಕೊರತೆಗಳ ಹೊರತಾಗಿಯೂ ದಿನಕ್ಕೆ 1000 ಕೋವಿಡ್ ಪರೀಕ್ಷೆಗಳನ್ನು ನಡೆಸುತ್ತಿದೆ. ಈ ಅನುಕರಣೀಯ ಸಾಧನೆ ಹಿಂದಿರುವ ಎಲ್ಲಾ ಸಿಬ್ಬಂದಿಗಳಿಗೂ ನನ್ನ ಅಭಿನಂದನೆಗಳು. ನೆರೆಯ ಬಳ್ಳಾರಿ ಮತ್ತು ರಾಯಚೂರು ಜಿಲ್ಲೆಗಳಲ್ಲಿಯೂ ಇದೇ ರೀತಿ ಪರೀಕ್ಷಾ ಸಾಮರ್ಥ್ಯ ಹೆಚ್ಚಿಸಲು ಮಾರ್ಗದರ್ಶನ ನೀಡುವಂತೆ ಮನವಿ ಮಾಡಿದ್ದೇನೆ ಎಂದು ಸಚಿವ ಕೆ. ಸುಧಾಕರ್ ಮಾಹಿತಿ ಹಂಚಿಕೊಂಡಿದ್ದಾರೆ.
ಕೊಪ್ಪಳದ ಮೆಡಿಕಲ್ ಕಾಲೇಜು ಕೆಲ ಕುಂದು ಕೊರತೆಗಳ ಹೊರತಾಗಿಯೂ ದಿನಕ್ಕೆ 1000 ಕೋವಿಡ್ ಪರೀಕ್ಷೆಗಳನ್ನು ನಡೆಸುತ್ತಿದೆ. ಈ ಅನುಕರಣೀಯ ಸಾಧನೆ ಹಿಂದಿರುವ ಎಲ್ಲಾ ಸಿಬ್ಬಂದಿಗಳಿಗೂ ನನ್ನ ಅಭಿನಂದನೆಗಳು. ನೆರೆಯ ಬಳ್ಳಾರಿ ಮತ್ತು ರಾಯಚೂರು ಜಿಲ್ಲೆಗಳಲ್ಲಿಯೂ ಇದೇ ರೀತಿ ಪರೀಕ್ಷಾ ಸಾಮರ್ಥ್ಯ ಹೆಚ್ಚಿಸಲು ಮಾರ್ಗದರ್ಶನ ನೀಡುವಂತೆ ಮನವಿ ಮಾಡಿದ್ದೇನೆ. pic.twitter.com/x1e0PYvR0y
— Dr Sudhakar K (Modi ka Parivar) (@DrSudhakar_) July 12, 2020