ಕೊಪ್ಪಳ: ಆಟಿಕೆಗಳ ಕ್ಲಸ್ಟರ್ ನಿರ್ಮಾಣಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಶನಿವಾರ ಭೂಮಿ ಪೂಜೆ ನೆರವೇರಿಸಿದರು. ಕೈಗಾರಿಕಾ ಸಚಿವ ಜಗದೀಶ್ ಎಸ್. ಶೆಟ್ಟರ್, ಕೃಷಿ ಸಚಿವ ಬಿ.ಸಿ. ಪಾಟೀಲ್, ಅರಣ್ಯ ಸಚಿವ ಆನಂದ್ ಸಿಂಗ್, ಗಣಿ ಮತ್ತು ಭೂವಿಜ್ಞಾನ ಸಚಿವ ಸಿ.ಸಿ. ಪಾಟೀಲ, ಏಕಸ್ ಕಂಪೆನಿಯ ಚೇರ್ಮನ್ ಅರವಿಂದ ಮೆಳ್ಳಿಗೆರಿ ಮತ್ತು ಇತರ ಗಣ್ಯರು ಉಪಸ್ಥಿತರಿದ್ದರು.
ಕಸ್ ಟಾಯ್ ಕ್ಲಸ್ಟರ್ ಕರ್ನಾಟಕ ಸರ್ಕಾರದ ‘ನಿರ್ದಿಷ್ಟ ಉತ್ಪನ್ನ ಕೈಗಾರಿ ಕಾ ಕ್ಲಸ್ಟರ್ ಅಭಿವೃದ್ಧಿ ಯೋಜನೆಯ ಒಂದು ಪ್ರಮುಖ ಭಾಗವಾಗಿದ್ದು, ಆಟಿಕೆ ಕ್ಲಸ್ಟರ್ ಸ್ಥಾಪನೆ ಮಾಡುವ ಮೂ ಲಕ ನಾವು 1 ಲಕ್ಷ ಜನರಿಗೆ ಉದ್ಯೋಗ ಕಲ್ಪಿಸುತ್ತಿದ್ದೇವೆ. ಇದಕ್ಕೆ 5 ಸಾವಿರ ಕೋಟಿ ರೂಪಾಯಿಗಳ ಬಂಡವಾಳ ವನ್ನು ಆಕರ್ಷಣೆ ಮಾಡುವ ಉದ್ದೇಶ ಹೊಂದಿದ್ದೇವೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಇದೇ ಸಂದರ್ಭದಲ್ಲಿ ತಿಳಿಸಿದರು.
ಕೊಪ್ಪಳ ಜಿಲ್ಲೆಯಲ್ಲಿ ಭಾರತದ ಮೊಟ್ಟ ಮೊದಲ ಆಟಿಕೆ ಉತ್ಪಾದನಾ ಕ್ಲಸ್ಟರ್ ಇದಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಕನಸಿನ ಆತ್ಮನಿರ್ಭರ್ ಭಾರತ್ ಮೇಕ್ ಇನ್ ಇಂಡಿಯಾ ಮತ್ತು ವೋಕಲ್ ಫಾರ್ ಲೋಕಲ್ ಗೆ ಪೂರಕವಾಗಿ ಕರ್ನಾಟಕದಲ್ಲಿ ಆರಂಭವಾಗುತ್ತಿರುವ ಏಕಸ್ ಟಾಯ್ ಕ್ಲಸ್ಟರ್, ಅಪಾರ ಪ್ರಮಾಣದ ಹೂಡಿಕೆ ಆಕರ್ಷಿಸುವ ಜತೆಗೆ, ವಿಫುಲ ಉದ್ಯೋಗ ಸೃಷ್ಟಿಸಲಿದೆ ಎಂದು ಅವರು ತಿಳಿಸಿದರು.