ಬೆಂಗಳೂರು: ಕರ್ನಾಟಕದಲ್ಲಿ ಕೊರೋನಾ ಹೆಮ್ಮಾರಿಯ ಆರ್ಭಟ ಜೋರಾಗಿದೆ. ಮಂಗಳವಾರ ಬರೋಬ್ಬರಿ 9058 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಬೆಂಗಳೂರು ನಗರವೊಂದರಲ್ಲೇ 2967 ಹೊಸ ಪ್ರಕರಣಗಳು ವರದಿಯಾಗಿದೆ.
ಆರೋಗ್ಯ ಇಲಾಖೆ ಹೊರಡಿಸಿರುವ ಪ್ರಕಟಣೆ ಈ ಕುರಿತ ಮಾಹಿತಿಯನ್ನು ಬಹಿರಂಗಪಡಿಸಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 3,51481ಕ್ಕೆ ಏರಿಕೆಯಾಗಿದೆ.
ಈ ನಡುವೆ, ಸೋಮವಾರ ಸಂಜೆಯಿಂದ ಮಂಗಳವಾರ ಸಂಜೆವರೆಗೆ ರಾಜ್ಯದಲ್ಲಿ 135 ಮಂದಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 5837ಕ್ಕೆ ಏರಿಕೆಯಾಗಿದೆ.
ಇಂದಿನ 01/09/2020 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.@CMofKarnataka @BSYBJP @DVSadanandGowda @SureshAngadi_ @MoHFW_INDIA @UNDP_India @WHOSEARO @UNICEFIndia @sriramulubjp @drashwathcn @BSBommai https://t.co/TXLqStAde8 pic.twitter.com/lpgf55xF4W
— K'taka Health Dept (@DHFWKA) September 1, 2020