ಬೆಂಗಳೂರು: ದೇಶದಲ್ಲೇ ಅತ್ಯುತ್ತಮ ಸಾರಿಗೆ ಸೇವೆಗೆ ಹೆಸರಾಗಿರುವ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ ಮತ್ತೊಂದು ಪ್ರಶಸ್ತಿ ಒಲಿದಿದೆ. Excellence In Innovation ವರ್ಗದಲ್ಲಿ ನಿಗಮದ ಧ್ವನಿಸ್ಪಂದನ ಉಪಕ್ರಮಕ್ಕೆ Governance now 12th (PSU)ರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ.
ಕೆಎಸ್ಆರ್ಟಿಸಿಯ ಮೈಸೂರು ನಗರ ಸಾರಿಗೆಯ 200 ಬಸ್ಸುಗಳಲ್ಲಿ ‘ಧ್ವನಿ ಸ್ಪಂದನ – ಆನ್ಬೋರ್ಡ್ ಬಸ್ ಐಡೆಂಟಿಫಿಕೇಶನ್ ಮತ್ತು ನ್ಯಾವಿಗೇಶನ್ ಸಿಸ್ಟಮ್’ ಎಂಬ ಯೋಜನೆಯನ್ನು GiZ ಜರ್ಮನಿ ಸಹಯೋಗದೊಂದಿಗೆ ಯಶಸ್ವಿಯಾಗಿ ಜಾರಿಗೆ ತರಲಾಗಿದೆ. ಈ ಕ್ರಮದಿಂದಾಗಿ ದೃಷ್ಟಿ ವಿಕಲ ಚೇತನ ಪ್ರಯಾಣಿಕರ ಪ್ರಯಾಣ ಅವಲಂಬನೆ ಗಣನೀಯವಾಗಿ ಕಡಿಮೆಯಾಗಿದೆ. ಅವರ ಆತ್ಮವಿಶ್ವಾಸ, ಭದ್ರತೆ ಮತ್ತು ಸಂಚಾರದ ಸ್ವಾತಂತ್ರ್ಯದಲ್ಲಿ ದೊಡ್ಡ ಮಟ್ಟದ ಬದಲಾವಣೆಗೆ ಕಾರಣವಾಗಿದೆ.
Governance Now ರವರು ಮಾರ್ಚ್ 11 ರಂದು ನವದೆಹಲಿಯಲ್ಲಿ ಆಯೋಜಿಸಿದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ವ್ಯವಸ್ಥಾಪಕ ನಿರ್ದೇಶಕ ಕೈಲಾಶ್ ಅಧಿಕಾರಿ ಹಾಗೂ ಅಮಿತ್ ಸಾದ್ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಕೆಎಸ್ಆರ್ಟಿಸಿ ನಿರ್ದೇಶಕರು (ಸಿ ಮತ್ತು ಜಾ) ಗಾಯಿತ್ರಿ ಅವರು ಪ್ರಶಸ್ತಿಯನ್ನು ಸ್ವೀಕರಿಸಿದರು.

