ರಾಜ್ಯದ 8 ಸ್ಥಳಗಳಿಗೆ ಕೆಎಸ್‌ಆರ್‌ಟಿಸಿ ಐರಾವತ ಬಸ್ಸುಗಳು ಆರಂಭ

ಬೆಂಗಳೂರು: ಕೊರೋನಾ ವೈರಾಣು ಹರಡುವುದನ್ನು ತಡೆಯುವ ನಿಟ್ಟಿನಲ್ಲಿ ಲಾಕ್’ಡೌನ್ ಜಾರಿಗೊಳಿಸಿದ್ದರಿಂದಾಗಿ ಸಾರಿಗೆ ಬಸ್’ಗಾಲ ಸಂಚಾರ ಸ್ಥಗಿತಗೊಂಡಿತ್ತು. ಕೆಲ ಸಮಯದ ಹಿಂದಷ್ಟೇ ಕೆಲವು ಕೆಎಸ್‌ಆರ್‌ಟಿಸಿ ಬಸ್ಸುಗಳ ಸಂಚಾರ ಆರಂಭವಾಯಿತಾದರೂ ಹವಾನಿಯಂತ್ರಿತ ಬಸ್ಸುಗಳ ಸಂಚಾರಕ್ಕೆ ಸರ್ಕಾರದಿಂದ ಗ್ರೀನ್ ಸಿಗ್ನಲ್ ಸಿಕ್ಕಿರಲಿಲ್ಲ. ಇದೀಗ ರಾಜ್ಯದ 8 ಸ್ಥಳಗಳಿಗೆ ಕೆಎಸ್‌ಆರ್‌ಟಿಸಿ ಎಸಿ ಬಸ್‍ಗಳ ಸಂಚಾರ ಆರಂಭವಾಗಲಿದೆ. ಗುರುವಾರದಿಂದ ಐರಾವತ ಬಸ್ಸುಗಳು ಸಂಚಾರ ಆರಂಭಿಸಲಿವೆ.

ಬೆಂಗಳೂರಿನಿಂದ ಮಂಗಳೂರು, ಕುಂದಾಪುರ, ಮೈಸೂರು, ಮಡಿಕೇರಿ, ಚಿಕ್ಕಮಗಳೂರು, ದಾವಣಗೆರೆ, ಶಿವಮೊಗ್ಗ ಹಾಗೂ ವಿರಾಜಪೇಟೆಗೆ ಎಸಿ ಬಸ್‍ಗಳ ಓಡಾಟ ಆರಂಭವಾಗಿವೆ ಎಂದು ಮೂಲಗಳು ತಿಳಿಸಿವೆ.

Related posts