ಕೆಎಸ್ಸಾರ್ಟಿಸಿ, ಬಿಎಂಟಿಸಿ ಬಸ್ ಪ್ರಯಾಣ ದರ ಏರಿಕೆ?

ಬೆಂಗಳೂರು: ಕೆಎಸ್ಸಾರ್ಟಿಸಿ, ಬಿಎಂಟಿಸಿ ಬಸ್ ಪ್ರಯಾಣ ದರ ಏರಿಕೆಗೆ ರಾಜ್ಯ ಸರ್ಕಾರ ತೀರ್ಮಾನ ಕೈಗೊಳ್ಳುವ ಸಾಧ್ಯತೆಗಳಿವೆ.

ಐದು ವರ್ಷಗಳಿಂದ ಡೀಸೆಲ್‌ ದರ ಹಲವು ಬಾರಿ ಏರಿಕೆಯಾದರೂ ಕೆಎಸ್ಸಾರ್ಟಿಸಿ ಬಸ್‌ ಪ್ರಯಾಣ ದರ ಪರಿಷ್ಕರಿಸಿಲ್ಲ. ಹಾಗಾಗಿ ಸಾರಿಗೆ ನಿಗಮಗಳು ನಷ್ಟದಲ್ಲಿವೆ ಎಂದು ಕೆಸ್ಸಾರ್ಟಿಸಿ ಮುಖ್ಯಸ್ಥರು ಹೇಳುತ್ತಿದ್ದಾರೆ.  ಬಜೆಟ್‌ ಅಧಿವೇಶನಕ್ಕೆ ಮೊದಲು ಇಲ್ಲವೇ ಅಧಿವೇಶನ ಸಂದರ್ಭದಲ್ಲೇ ದರ ಪರಿಷ್ಕರಣೆಗೆ ಸರ್ಕಾರ ಚಿಂತನೆ ನಡೆಸುತ್ತಿದೆ.

2018ರ ಸೆಪ್ಟಂಬರ್‌ನಲ್ಲಿ ಕೆಸ್ಸಾರ್ಟಿಸಿ-ಬಿಎಂಟಿಸಿ ಬಸ್‌ಗಳ ಪ್ರಯಾಣ ದರವನ್ನು ಸರಾಸರಿ ಶೇ.18ರಷ್ಟು ಹೆಚ್ಚಿಸಲಾಯಿತಾದರೂ ಅಂತಿಮ ಕ್ಷಣದಲ್ಲಿ ಈ ಆದೇಶವನ್ನು ಹಿಂಪಡೆಯಲಾಗಿತ್ತು. ಆದರೆ ಈ ಬಾರಿ ದರ ಪರಿಷ್ಕರಣೆ ಮಾಡದಿದ್ದಲ್ಲಿ ಸಾರಿಗೆ ನಿಗಮಗಳು ತೀವ್ರ ಆರ್ಥಿಕ ಸಂಕಷ್ಟ ಎದುರಿಸಲಿದೆ ಎಂದು ನಿಗಮಗಳ ಅಧಿಕಾರಿಗಳು ಸರ್ಕಾರದ ಗಮನಸೆಳೆದಿದ್ದಾರೆ.

Related posts