KSRTC ಇಡೀ ದೇಶಕ್ಕೆ ಮಾದರಿ ಮಾತ್ರವಲ್ಲ, ಮಾರ್ಗದರ್ಶಿ.. ಇತರ ರಾಜ್ಯಗಳ ಸಾರಿಗೆ ಅಧಿಕಾರಿಗಳು ದೌಡು

ಬೆಂಗಳೂರು: ಉತ್ಕೃಷ್ಟ ಸಾರಿಗೆ ಸೇವೆ ಸಂಬಂಧ ಸಾಲು ಸಾಲು ಪ್ರಶಸ್ತಿಗಳನ್ನು ಬಾಚುತ್ತಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಇದೀಗ ದೇಶದ ಕುತೂಹಲದ ಕೇಂದ್ರಬಿಂದುವಾಗಿದೆ. KSRTCಯ ಕಾರ್ಯವೈಖರಿ ಬಗ್ಗೆ ಕೂಡಾ ಇತರ ರಾಜ್ಯಗಳಿಗೆ ಕುತೂಹಲ ಉಂಟಾಗಿದೆ. ಉತ್ತರ ಪ್ರದೇಶ ರಸ್ತೆ ಸಾರಿಗೆ ಸಂಸ್ಥೆಯ ಹೆಚ್ಚುವರಿ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಅಧಿಕಾರಿಗಳ ತಂಡ ಕೆಎಸ್ಸಾರ್ಟಿಸಿ ಕಚೇರಿಗೆ ಭೇಟಿ ನೀಡಿದ ಬೆಳವಣಿಗೆ ಗಮನಸೆಳೆದಿದೆ. .
ದಿನಾಂಕ 31.08.2023 ಮತ್ತು 01.09.2023 ರಂದು ಉತ್ತರ ಪ್ರದೇಶ ರಸ್ತೆ ಸಾರಿಗೆ ಸಂಸ್ಥೆಯ ಅಧಿಕಾರಿಗಳ ತಂಡವು ಕರ್ನಾಟಕ ರಾಜ್ಯ ಸರ್ಕಾರಿ ಸ್ವಾಮ್ಯದ KSRTC ಅನುಷ್ಠಾನಗೊಳಿಸಿರುವ ಉಪಕ್ರಮಗಳ ಬಗ್ಗೆ ಅಧ್ಯಯನ ನಡೆಸಲು ಎರಡು ದಿನಗಳ ಭೇಟಿ ನೀಡಿದೆ. ಈ ಸಂದರ್ಭದಲ್ಲಿ ಬೆಂಗಳೂರು ಕೇಂದ್ರೀಯ ವಿಭಾಗದ ಘಟಕ-4, ಪ್ರಾದೇಶಿಕ ಕಾರ್ಯಾಗಾರ, ಕೆಂಗೇರಿ, ಕೆಂಪೇಗೌಡ ಬಸ್‌ ನಿಲ್ದಾಣ, ಮೈಸೂರು ರಸ್ತೆ ಸ್ಯಾಟಲೈಟ್‌ ಬಸ್‌ ನಿಲ್ದಾಣದ ನಿಯಂತ್ರಣ ಕೊಠಡಿಗಳಿಗೆ ಈ ನಿಯೋಗ ಭೇಟಿ ನೀಡಿ ಮಾಹಿತಿ ಪಡೆದಿದೆ.
ವಾಹನಗಳ ತಾಂತ್ರಿಕ ನಿರ್ವಹಣೆ ಮತ್ತು ಕಾರ್ಯಾಚರಣೆ, ಡ್ಯೂಟಿ ರೋಟಾ ವ್ಯವಸ್ಥೆ, ಮುಂಗಡ ಆಸನ ಕಾಯ್ದಿರಿಸುವಿಕೆ, ಕಾರ್ಮಿಕರ ಕಲ್ಯಾಣಕ್ಕಾಗಿ ಕೈಗೊಂಡಿರುವ ವಿನೂತನ ಕ್ರಮಗಳು, ಮಾಹಿತಿ ತಂತ್ರಜ್ಞಾನ ಉಪಕ್ರಮಗಳು, ಬಸ್‌ ನಿಲ್ದಾಣ, ಘಟಕಗಳ ಕಾಮಗಾರಿ ಪದ್ಧತಿ, ಬಸ್ಸುಗಳ ಬ್ರ್ಯಾಂಡಿಂಗ್, ಬಸ್ಸುಗಳ ಪುನಶ್ವೇತನ ಕಾರ್ಯ, ಬಸ್‌ ನಿಲ್ದಾಣದ ಸ್ವಚ್ಛತೆ ಬಗ್ಗೆ ತ್ತರ ಪ್ರದೇಶ ರಸ್ತೆ ಸಾರಿಗೆ ಸಂಸ್ಥೆಯ ಅಧಿಕಾರಿಗಳ ತಂಡ ಮಾಹಿತಿ  ಪಡೆದಿದೆ.
 https://twitter.com/KSRTC_Journeys/status/1697567354278883711
ಕೆಎಸ್ಸಾರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ವಿ. ಅನ್ಬುಕುಮಾರ್ ಕಚೇರಿಗೂ ಭೇಟಿ ನೀಡಿದ ಉತ್ತರ ಪ್ರದೇಶ ರಸ್ತೆ ಸಾರಿಗೆ ಸಂಸ್ಥೆಯ ಹೆಚ್ಚುವರಿ ವ್ಯವಸ್ಥಾಪಕ ನಿರ್ದೇಶಕರಾದ ಅನ್ನಪೂರ್ಣ ಗರ್ಗ್  ಅವರನ್ನೊಳಗೊಂಡ ಅಧಿಕಾರಿಗಳ ತಂಡವು ರಾಜ್ಯದ ಸಾರಿಗೆ ನಿಗಮದ ಸಮಗ್ರ ಉಪಕ್ರಮಗಳ ಮಾಹಿತಿ ಪಡೆ ಪಡೆಯಿತು.  ನಿರ್ದೇಶಕರು (ಸಿ&ಜಾ) ಸುಂದರೇಶ್ ಬಾಬು, ಮುಖ್ಯ ಪ್ರಧಾನ ವ್ಯವಸ್ಥಾಪಕ (ತಾಂತ್ರಿಕ) ಆರ್. ಎನ್.‌ ವರ್ಮ, ಉತ್ತರ ಪ್ರದೇಶ ರಸ್ತೆ ಸಾರಿಗೆ ಸಂಸ್ಥೆಯ ಸಲಹೆಗಾರರು (ಕಾರ್ಯಾಚರಣೆ) ಅತುಲ್‌ ಜೈನ್ ಮತ್ತು ನಿಗಮದ ಹಿರಿಯ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Related posts