ಕೆಎಸ್‌ಆರ್‌ಟಿಸಿ ನೌಕರರಿಗೆ 1 ವರ್ಷ ವೇತನರಹಿತ ರಜೆ ವಿಚಾರ; ಸರ್ಕಾರಕ್ಕೆ ಪ್ರತಿಪಕ್ಷ ತರಾಟೆ

ಬೆಂಗಳೂರು: ಕೊರೋನಾ ಹಾವಳಿ ಸಂದರ್ಭದಲ್ಲಿ ರಾಜ್ಯ ಸಾರಿಗೆ ಸಂಸ್ಥೆಯಲ್ಲಿನ ನೌಕರರಿಗೆ ಕಡ್ಡಾಯ ರಜೆ ನೀಡುವ ಆರೋಪ ಬಗ್ಗೆ ವಿಧಾಸಭೆಯ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಕೆಎಸ್‌ಆರ್‌ಟಿಸಿ ನೌಕರರಿಗೆ 1 ವರ್ಷ ವೇತನರಹಿತ ರಜೆ ನೀಡುವ ಆಲೋಚನೆ ಕಾರ್ಮಿಕ ವಿರೋಧಿ ಮಾತ್ರವಲ್ಲ ಅಮಾನವೀಯ ಕ್ರಮ ಎಂದು ಸಿದ್ದರಾಮಯ್ಯ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಈ ಕುರಿತಂತೆ ಟ್ವೀಟ್ ಮಾಡಿರುವ ಅವರು, ಕೆಎಸ್‌ಆರ್‌ಟಿಸಿಯ ಮೇಲ್ಪಂಕ್ತಿಯನ್ನು ಇತರ ಇಲಾಖೆಗಳು ಮತ್ತು‌ ಖಾಸಗಿ ಕಂಪೆನಿಗಳು ಅನುಸರಿಸಿದರೆ ಲಕ್ಷಾಂತರ ಕಾರ್ಮಿಕರ ಕುಟುಂಬದ ಪಾಡೇನು? ರಾಜ್ಯ ಸರ್ಕಾರ ದಿವಾಳಿಯಾಗಿದೆಯೇ? ಏನು ಪ್ರಶ್ನಿಸಿದ್ದಾರೆ.

 

Related posts