ಲಕ್ಷ್ಮೇಶ್ವರ ಠಾಣೆಗೆ ಬೆಂಕಿ ಹಚ್ಚಿದ್ದ ಪ್ರಕರಣ: 23 ಜನರನ್ನು ದೋಷಿ ಎಂದ ಕೋರ್ಟ್

ಗದಗ್: ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪೊಲೀಸ್ ಠಾಣೆಗೆ 2017ರಲ್ಲಿ ಬೆಂಕಿ ಹಚ್ಚಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 23 ಜನರ ವಿರುದ್ಧ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ದೋಷಿ ಎಂದು ತೀರ್ಪು ನೀಡಿದೆ.

8 ವರ್ಷಗಳ ಹಿಂದೆ, 2017ರಲ್ಲಿ ಅಕ್ರಮ ಮರಳು ಸಾಗಿಸುವ ವಾಹನ ತಡೆದ ಪೊಲೀಸರು ಚಾಲಕನನ್ನು ಥಳಿಸಿದ್ದರಿಂದ ಆತ ಮೃತಪಟ್ಟಿದ್ದ ಎಂದು ಆರೋಪಿಸಿ ಸಾರ್ವಜನಿಕರು ಪ್ರತಿಭಟನೆ ನಡೆಸಿದ್ದರು. ಆ ಸಂದರ್ಭದಲ್ಲಿ ಉದ್ರಿಕ್ತರು ಪೊಲೀಸ್ ಠಾಣೆ ಮೇಲೆ ದಾಳಿ ಮಾಡಿದ್ದರು. ಪೀಠೋಪಕರಗಳು, ಪೊಲೀಸ್ ಜೀಪ್ ಹಾಗೂ ದ್ವಿಚಕ್ರ ವಾಹನಗಳಿಗೆ ಬೆಂಕಿ ಹಚ್ಚಿದ್ದರು.

ಈ ಘಟನೆ ಸಂಬಂಧ 112 ಜನರ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಪೈಕಿ 8 ಮಂದಿ ಮೃತಪಟ್ಟಿದ್ದಾರೆ.
ಈ ಪ್ರಕರಣ ಕುರಿತಂತೆ ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಲಯ 23 ಜನರನ್ನು ದೋಷಿ ಎಂದು ತೀರ್ಪು ನೀಡಿದೆ. ಶಿಕ್ಷೆಯ ಪ್ರಮಾಣವನ್ನು ನ್ಯಾಯಾಲಯ ಕಾಯ್ದಿರಿಸಿದೆ.

Related posts