ಮುಂದುವರಿದ ಭೂಕುಸಿತ; ಮಂಗಳೂರು-ಬೆಂಗಳೂರು ರೈಲು ಸಂಚಾರ ಮತ್ತೆ ಸ್ಥಗಿತ

ಮಂಗಳೂರು: ಕರಾವಳಿ ಮಲೆನಾಡಿನಲ್ಲಿ ಮುಂಗಾರು ಮಳೆ ಅವಾಂತರ ಸೃಷ್ಟಿಸಿದ್ದು ಭೂಕುಸಿತದ ಘಟನೆಗಳು ಮರುಕಳಿಸುತ್ತಲೇ ಇವೆ. ಬೆಂಗಳೂರು-ಮಂಗಳೂರು ರೈಲು ಮಾರ್ಗದಲ್ಲಿ ಮತ್ತೆ ಭೂಕುಸಿತವಾಗಿದ್ದು ರೈಲುಗಳ ಸಂಚಾರಕ್ಕೆ ಅಡ್ಡಿಯಾಗಿದೆ.

ಬಾಳ್ಳುಪೇಟೆ ಹಾಗೂ ಸಕಲೇಶಪುರ ಮಧ್ಯೆ ಭೂಕುಸಿತ ಸಂಭವಿಸಿದೆ. ಇದರಿಂದಾಗಿ ಶುಕ್ರವಾರ ಬೆಂಗಳೂರಿನಿಂದ ಹೊರಟಿದ್ದ ಬೆಂಗಳೂರು-ಕಣ್ಣೂರು ಎಕ್ಸ್‌ಪ್ರೆಸ್ ರೈಲು ಮತ್ತು ಬೆಂಗಳೂರು-ಮರ್ಡೇಶ್ವರ ಎಕ್ಸ್‌ಪ್ರೆಸ್ ರೈಲು ಆಲೂರು ಹಾಗೂ ಹಾಸನದಲ್ಲಿ ಸ್ಥಗಿತಗೊಂಡಿದೆ. ಭೂಕುಸಿತದ ಹಿನ್ನೆಲೆಯಲ್ಲಿ ಈ ಪರಿಸ್ಥಿತಿ ಎದುರಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Related posts