ಮನೆಯಿಂದ ಹೊರಬಂದರೆ ಅರೆಸ್ಟ್ ಮಾಡಿ; ಸಿಎಂ ಕಟ್ಟಪ್ಪಣೆ

ಬೆಂಗಳೂರು: ರಾಜ್ಯದಲ್ಲೂ ಕೊರೋನಾ ಸೋಂಕು ಪ್ರಕರಣಗಳು ಹೆಚ್ಚುತ್ತಲೇ ಇರುವುದರಿಂದ ಪರಿಸ್ಥಿತಿ ನಿಭಾಯಿಸಲು ಸರ್ಕಾರ ಹರಸಾಹಸ ಪಡುತ್ತಿದೆ. ಕೊರೋನಾ ಸೋಂಕು ಹರಡದಂತೆ ಪರಿಸ್ಥಿತಿಯನ್ನು ಕ್ಕಾಪಾಡುವ ಉದ್ದೇಶದಿಂದ 21 ದಿನಗಳ ಕಾಲ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ಹಾಗಾಗಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಲಾಗಿದೆ. ಮಾರುಕಟ್ಟೆಗಳೂ ಬಿಕೋ ಎನ್ನುತ್ತಿವೆ. ಕೆಲ ಮಾಫಿಯಾಗಲು ಈ ಪರಿಸ್ಥಿತಿಯ ದುರ್ಲಾಭ ಪಡೆಯುವ ಪ್ರಯತ್ನ ಮಾಡುತ್ತಿವೆ.

ಲಾಕ್ ಡೌನ್ ಆದೇಶ ಜಾರಿಗೆ ಬಂದ ನಂತರ ಬಹುತೇಕ ಅಂಗಡಿಗಳು ಮುಚ್ಸಿದ್ದು ಅಲ್ಲೋ ಇಲ್ಲೋ ತೆರೆದಿರುವ ಮಳಿಗೆಗೆಗಳಲ್ಲಿ ಅಗತ್ಯ ವಸ್ತುಗಳನ್ನು ದುಪ್ಪಟ್ಟು ದರದಲ್ಲಿ ಮಾರಲಾಗುತ್ತಿವೆ. ಈ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುವಂತೆ ಸಿಎಂ ಯಡಿಯೂರಪ್ಪ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಆದೇಶಿಸಿದ್ದಾರೆ.

ಕೊರೋನಾ ಉಲ್ಬಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಯವರು ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಲ್ಲಿ ಸಮಾಲೋಚನೆ ನಡೆಸಿದರು. ದಿನನಿತ್ಯ ಬಳಸುವ ವಸ್ತುಗಳನ್ನು ಹೆಚ್ಚಿನ‌ ಬೆಲೆಗೆ ಮಾರಾಟ ಮಾಡುವುದು ಕಂಡುಬಂದರೆ ಅಂತವರ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದೂ ಸಿಎಂ ಕಟ್ಟಪ್ಪಣೆ ಮಾಡಿದರು.

ಇದೇ ವೇಳೆ, ಲಾಕ್ ಡೌನ್ ಜಾರಿಯಲ್ಲಿದ್ದರೂ ಸಾರ್ವಜನಿಕರು ಓಡಾಡುತ್ತಿದ್ದಾರೆ. ಕರ್ಫ್ಯೂ ಉಲ್ಲಂಘಿಸಿ ರಸ್ತೆಗಿಳಿದ ಮಂದಿ ಮೇಲೆ ಪೊಲೀಸರು ಲಾಠಿ ಪ್ರಹಾರ ಮಾಡಿದರೂ ಬಹುತೇಕ ಕಡೆ ಜನ ಕ್ಯಾರೇ ಅನ್ನುತ್ತಿಲ್ಲ. ಹಾಗಾಗಿ ಲಾಕ್ ಡೌನ್ ನಿಯಮ ಉಲ್ಲಂಘಿಸುವವರನ್ನು ನಿರ್ದಾಕ್ಷಿಣ್ಯವಾಗಿ ಬಂಧಿಸಿ ಎಂದು ಸಿಎಂ ಯಡಿಯೂರಪ್ಪ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಆದೇಶಿಸಿದರು.

ಜಿಲ್ಲೆ ಜಿಲ್ಲೆಗಳ ನಡುವೆ ಬಾರ್ಡರ್ ಗಳನ್ನು ಸೀಲ್ ಮಾಡಬೇಕು. ಹೊರ ರಾಜ್ಯಗಳಿಂದ ಯಾರೂ ರಾಜ್ಯವನ್ನು ಪ್ರವೇಶ ಮಾಡಬಾರದು. ಅದರಲ್ಲೂ ಕಾಸರಗೋಡು ಮೂಲಕ ಬರುವವರ ಮೇಲೆ ತೀವ್ರ ನಿಗಾ ಇಡಬೇಕು ಎಂದು ಅವರು ನಿರ್ದೇಶನ ನೀಡಿದರು.

Related posts