ಲಾಕ್‌ಡೌನ್ ಹಿನ್ನೆಲೆ; ಸಿಲಿಕಾನ್ ಸಿಟಿಗೆ ಗುಡ್‌ಬೈ ಎನ್ನುತ್ತಿರುವ ಜನ

(ವರದಿ: ಪ್ರತಾಪ್ ರಾಜ್)

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಾಣು ಸೋಂಕು ವ್ಯಾಪಕವಾಗಿ ಹರಡುತ್ತಿದ್ದು ಇದನ್ನು ನಿಯಂತ್ರಿಸುವ ಸಂಬಂಧ ನಿಷ್ಟುರ ಕ್ರಮಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಇದೀಗ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಬುಧವಾರದಿಂದ ಲಾಕ್‌ಡೌನ್ ಜಾರಿಯಾಗಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರಕಟಿಸಿದ್ದಾರೆ.

ಮಂಗಳವಾರ ರಾತ್ರಿಯಿಂದಲೇ ಲಾಕ್‌ಡೌನ್ ಜಾರಿಯಾಗಲಿದ್ದು ಈ ಕಾರಣದಿಂದಾಗಿ ರಾಜಧಾನಿ ಬೆಂಗಳೂರು ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ನೆಲೆಸಿದ್ದ ಜನರು ಇದೀಗ ತವರಿನತ್ತ ಮುಖ ಮಾಡಿದ್ದಾರೆ.
ಈ ಬೆಳವಣಿಗೆಯಿಂದಾಗಿ ಬೆಂಗಳೂರಿನ ಮೆಜೆಸ್ಟಿಕ್ ಬಸ್ ನಿಲ್ದಾಣ ಇಂದು ಬೆಳಗ್ಗೆಯಿಂದಲೇ ವಿದ್ಯಮಾನಗಳ ಕೇಂದ್ರ ಬಿಂದುವಾಯಿತು. ಜನರು ಕುಟುಂಬ ಸಮೇತರಾಗಿ ಬಸ್‌ಗಳಲ್ಲಿ ತಮ್ಮ ತಮ್ಮ ಊರುಗಳಿಗೆ ಮರಳುತ್ತದ್ದ ದೃಶ್ಯ ಕಂಡುಬಂತು.

ಬೆಂಗಳೂರಿನಿಂದ ಹೊರ ಜಿಲ್ಲೆಗಳನ್ನು ಸಂಪರ್ಕಿಸುವ ರಸ್ತೆಗಳು ಕೂಡಾ ವಾಹನ ಸಂಚಾರ ದಟ್ಟಣೆಗೆ ಸಾಕ್ಷಿಯಾದವು. ಬೆಂಗಳೂರು ಹೊರವಲಯದ ಟೋಲ್ ಕೇಂದ್ರಗಳಲ್ಲೂ ಹಿಂದೆಂದಿಗಿಂತಲೂ ಹೆಚ್ಚು ವಾಹನಗಳ ಸಾಲು ಕಂಡುಬರುತ್ತಿತ್ತು.

Related posts