ಅನಗತ್ಯವಾಗಿ ಓಡಾಡಿದರೆ ಜೋಕೆ; ಸಿಲಿಕಾನ್ ಸಿಟಿ ಜನರಿಗೆ ಪೊಲೀಸ್ ಆಯುಕ್ತರ ಎಚ್ಚರಿಕೆ

ಬೆಂಗಳೂರು: ರಾಜ್ಯದಲ್ಲಿ ನಿತ್ಯವೂ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ವೈರಾಣು ಹರಡದಂತೆ ತಡೆಯಲು ರಾಜಧಾನಿ ಬೆಂಗಳೂರು ಹಾಗೂ ಕೆಲವು ಜಿಲ್ಲೆಗಳಲ್ಲಿ ಲಾಕ್’ಡೌನ್ ಜಾರಿಗೊಳಿಸಲಾಗಿದೆ. ಆದರೆ ರಾಜಧಾನಿ ಬೆಂಗಳೂರಿನ ವಿದ್ಯಮಾನಗಳತ್ತ ಗಮನಹರಿಸಿದರೆ ಲಾಕ್’ಡೌ ಸನ್ನಿವೇಶ ಕಂಡುಬರುತ್ತಿಲ್ಲ. ಮಾರುಕಟ್ಟೆ ಪ್ರದೇಶಗಳಲ್ಲಿ ಜನಸಂದಣಿ ಎಂದಿನಂತಿದ್ದರೆ, ಬಸ್ ನಿಲ್ದಾಣ, ರೈಲು ನಿಲ್ದಾಣ ಬಳಿ ಭಾರೀ ಸಂಖ್ಯೆಯಲ್ಲಿ ಜನ ಜಮಾಯಿದ್ದರು. ರಾಜಧಾನಿಯ ರಸ್ತೆಗಳಲ್ಲಿ ವಾಹನ ಸಂಚಾರವೂ ಹೆಚ್ಚಾಗಿತ್ತು.

ಈ ನಡುವೆ ಅನಗತ್ಯವಾಗಿ ಓಡಾಡಿದರೆ ಜೋಕೆ ಎಂಬ ಸಂದೇಶವನ್ನು ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ರವಾನಿಸಿದ್ದಾರೆ.
ಲಾಕ್’ಡೌನ್ ಜಾರಿಯಾದ ನಂತರ ಮೊದಲ ದಿನವಾದ ಇಂದು ಬೆಳಗ್ಗೆ ಆಯುಕ್ತ ಎನ್. ಭಾಸ್ಕರ್ ರಾವ್ ನಗರ ಸುತ್ತಾಡಿ ಲಾಕ್ ಡೌನ್ ಹೇಗೆ ಜಾರಿಗೆ ಬಂದಿದೆ ಎಂದು ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಉದ್ದಿಗಾರರೊಂದಿಗೆ ಮಾತನಾಡಿದ ಪೊಲೀಸ್ ಆಯುಕ್ತರು, ಪರಿಸ್ಥಿತಿ ಅರ್ಥ ಮಾಡಿಕೊಂಡು ಜನರು ಸಹಕರಿಸಬೇಕಿದೆ ಎಂದರು. ಅಗತ್ಯ ವಸ್ತುಗಳು, ಸೇವೆಗಳನ್ನು ಪಡೆಯಲು ಮಧ್ಯಾಹ್ನ 12 ಗಂಟೆಯವರೆಗೆ ಅವಕಾಶವಿದೆ ಎಂದರು.

Related posts