ರಾಜ್ಯದಲ್ಲಿನ ಕಳಪೆ ಬಿತ್ತನೆ ಬೀಜ ಮಾಫಿಯಾದ ಕಾರಸ್ಥಾನ ಆಂಧ್ರಪ್ರದೇಶ?

ಬೆಂಗಳೂರು: ರಾಜ್ಯದಲ್ಲಿನ ಕಳಪೆ ಬಿತ್ತನೆ ಬೀಜದ ಮಾಫಿಯಾಯನ್ನು ಬಯಲು ಮಾಡಲಾಗಿದ್ದು ಆಂದ್ರದ ಮೂಲವನ್ನು ಪತ್ತೆ ಮಾಡಲಾಗಿದೆ. ಈ ಮಾಫಿಯಾ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಸರ್ಕಾರ ಸೂಚಿಸಿದೆ.

ವಿಕಾಸಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಸಚಿವ ಬಿ.ಸಿ.ಪಾಟೀಲ್, ಆಂಧ್ರದಲ್ಲಿ ರಿಜೆಕ್ಟ್ ಆಗಿದ್ದ ಬೀಜಗಳನ್ನು ರಾಜ್ಯದಲ್ಲಿ ಮಾರಾಟ ಮಾಡಲಾಗುತ್ತಿತ್ತು. ಮುಸುಕಿನ ಜೋಳ, ಸೂರ್ಯಕಾಂತಿ, ಹತ್ತಿ ಇತ್ಯಾದಿ ಕಳಪೆ ಬೀಜಗಳನ್ನು ರಾಜ್ಯದ ರೈತರಿಗೆ ನೀಡಿ ವಂಚಿಸಲಾಗುತ್ತಿತ್ತು ಎಂದರು. ಸುಮಾರು ಹತ್ತು ಸಾವಿರ ಕ್ವಿಂಟಾಲ್ ಕಳಪೆ ಬೀಜ ವಶಕ್ಕೆ ಪಡೆದು ಎಂಟು ಕ್ರಿಮಿನಲ್ ಕೇಸ್ ದಾಖಲಾಗಿದೆ ಎಂದು ಕೃಷಿ ಸಚಿವರು ತಿಳಿಸಿದರು.

ಇದನ್ನೂ ಓದಿ.. ಎತ್ತಿನ ಹೊಳೆ ಕಾಮಗಾರಿ ಶೀಘ್ರ ಪೂರ್ಣ; ಮಾರ್ಚ್ ವೇಳೆಗೆ ಪ್ರಾಯೋಗಿಕವಾಗಿ ನೀರು

ಕೇಂದ್ರದ ಮಟ್ಟದಲ್ಲಿಯೂ ನಮ್ಮ ರಾಜ್ಯದ ಅಗ್ರಿವಾರ್ ರೂಮ್ ಸದ್ದು ಮಾಡಿದ್ದು ಕೇಂದ್ರದಿಂದಲೂ ಸಹ ಮೆಚ್ಚುಗೆ ವ್ಯಕ್ತವಾಗಿದೆ. ಲಾಕ್ಡೌನ್ ಘೋಷಣೆಯಾಗುತ್ತಿದ್ದಂತೆಯೇ ರೈತರ ಕೃಷಿ ಚಟುವಟಿಕೆಗಳಿಗೆ ಯಾವುದೇ ತೊಂದರೆಯಾಗದಂತೆ ಸರ್ಕಾರ ಕಾರ್ಯಪ್ರವೃತ್ತವಾಗಿ ಕೆಲಸ ನಿರ್ವಹಿಸಿದೆ‌ ಎಂದವರು ತಿಳಿಸಿದರು.

ರಾಜ್ಯದ ಎಲ್ಲಾ 30 ಜಿಲ್ಲೆಗಳಿಗೆ ಭೇಟಿ ಕೊಟ್ಟು ರೈತರ ಸಮಸ್ಯೆ ಆಲಿಸಿ ರೈತರ ನೆರವಿಗೆ ಬರುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದು, ಕೊರೊನಾ ಲಾಕ್ಡೌನ್ ವಿಶೇಷ ಪ್ಯಾಕೇಜ್‌ನಲ್ಲಿ ಮುಖ್ಯವಾಗಿ ಹೂ ಬೆಳೆಗಾರರಿಗೆ ಪ್ಯಾಕೇಜ್ ನೀಡಿದ್ದಾರೆ ಎಂದು ಸಚಿವ ಬಿ.ಸಿ.ಪಾಟೀಲ್ ಇದೇ ವೇಳೆ ಸಂತಸ ಹಂಚಿಕೊಂಡರು. ಆರ್ಥಿಕ ಸಂಕಷ್ಟದಲ್ಲಿಯೂ ಮುಖ್ಯಮಂತ್ರಿ ರೈತರ ಬಗ್ಗೆ ಕಾಳಜಿಯಿಂದಾಗಿ ಪ್ಯಾಕೇಜ್ ಪ್ರಕಟ ಮಾಡಿದ್ದಾರೆ. ಸದ್ಯದಲ್ಲಿಯೇ ತರಕಾರಿ ಮತ್ತು ಹಣ್ಣು ಬೆಳೆಗಾರರಿಗೂ ಪ್ಯಾಕೇಜ್ ಪ್ರಕಟವಾಗಲಿದೆ ಎಂದರು.

ಇದನ್ನೂ ಓದಿ.. ಚಮ್ಮಾರರು, ದರ್ಜಿಗಳು, ಕುಂಬಾರರು ಸೇರಿದಂತೆ ಇನ್ನುಳಿದ ಶ್ರಮಿಕ ವರ್ಗಕ್ಕೂ ನೆರವು ನೀಡಿ

 

Related posts